ರಾಜ್ಯ

ಕೊರೋನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ವಿಸ್ತರಣೆ ಅಗತ್ಯ: ನಿರಾಣಿ

ಕೋವಿಡ್ ತಡೆಗಾಗಿ ಲಾಕ್ ಡೌನ್ ವಿಸ್ತರಣೆ ಮಾಡಿದರೇ ಒಳ್ಳೆಯದು ಎಂದು ಸಚಿವ ಮುರುಗೇಶ್ ನಿರಾಣಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕೊರೋನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ವಿಸ್ತರಣೆ ಅಗತ್ಯ: ನಿರಾಣಿ
ಮುರುಗೇಶ್ ನಿರಾಣಿ
Published On :

ಕಲಬುರಗಿ: ಕೊರೋನಾ 2ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಈಗಾಗಲೇ ಮೇ 24ರವರೆಗೆ ಲಾಕ್ ಡೌನ್ ಜಾರಿಯಲ್ಲಿದ್ದು ಈ ನಡುವೆ ಕೋವಿಡ್ ತಡೆಗಾಗಿ ಲಾಕ್ ಡೌನ್ ವಿಸ್ತರಣೆ ಮಾಡಿದರೇ ಒಳ್ಳೆಯದು ಎಂದು ಸಚಿವ ಮುರುಗೇಶ್ ನಿರಾಣಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕಲ್ಬುರ್ಗಿಯಲ್ಲಿ ಮಾತನಾಡಿದ ಸಚಿವ ಮುರುಗೇಶ್ ನಿರಾಣಿ, ಕೊರೋನಾ ತಡೆಗೆ 10 ದಿನಗಳ ಕಾಲ ಲಾಕ್ ಡೌನ್ ಮಾಡಿದರೇ ಉತ್ತಮ. ಈ ಬಗ್ಗೆ ಸಿಎಂಗೆ ತಿಳಿಸಿದ್ದೇವೆ. ಆದರೆ ಸರ್ಕಾರ ಕೈಗೊಳ್ಳುವ ನಿರ್ಧಾರ ಅಂತಿಮವಾಗಲಿದೆ ಎಂದು ಹೇಳಿದರು.

ಕಳೆದ 3 ದಿನಗಳಿಂದ ಕೊರೋನಾ ಸ್ವಲ್ಪ ಕಡಿಮೆಯಾಗಿದೆ. ಆದರೇ ಗ್ರಾಮೀಣ ಭಾಗದಲ್ಲಿ ಹೆಚ್ಚುತ್ತಿದೆ. ತಜ್ಞರು ಕೊಟ್ಟ ಸಲಹೆಯನ್ನು ಜಾರಿ ಮಾಡುತ್ತೇವೆ ಎಂದು ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.