ಉಡುಪಿ: ಮೊಬೈಲ್ ಗೇಮ್ ಆಡಬೇಡವೆಂದು ಬುದ್ದಿ ಹೇಳಿದ್ದಕ್ಕೆ 16 ವರ್ಷದ ಬಾಲಕಿ ಆತ್ಮಹತ್ಯೆ!
ಮೊಬೈಲ್ ಗೇಮಿಂಗ್ ಚಟ ಯುವಕ/ಯುವತಿಯರ ಜೀವನವನ್ನು ಹೇಗೆ ಆಕ್ರಮಿಸಿಕೊಂಡಿದೆ ಎಂಬುದನ್ನು ಎತ್ತಿ ತೋರಿಸುವ ಘಟನೆಯೊಂದು ಉಡುಪಿ ಜಿಲ್ಲೆಯ ಕಾಪುವಿನಲ್ಲಿ ನಡೆದಿದೆ.

ಕಾಪು: ಮೊಬೈಲ್ ಗೇಮಿಂಗ್ ಚಟ ಯುವಕ/ಯುವತಿಯರರ ಜೀವನವನ್ನು ಹೇಗೆ ಆಕ್ರಮಿಸಿಕೊಂಡಿದೆ ಎಂಬುದನ್ನು ಎತ್ತಿ ತೋರಿಸುವ ಘಟನೆಯೊಂದು ಉಡುಪಿ ಜಿಲ್ಲೆಯ ಕಾಪುವಿನಲ್ಲಿ ನಡೆದಿದೆ. 16 ವರ್ಷದ ಬಾಲಕಿಯೊಬ್ಬಳು ಆಕೆ ಮೊಬೈಲ್ ಫೋನ್‌ನಲ್ಲಿ ವಿಡಿಯೋ ಗೇಮ್‌ಗಳನ್ನು ಆಡಿದ್ದಕ್ಕಾಗಿ ಪೋಷಕರು ನಿಂದಿಸಿದರೆಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೇ 15 ರ ಸಂಜೆ ಕಾಪು ತಾಲೂಕಿನ ಮಣಿಪುರ ಗ್ರಾಮದ ಮಣಿಪುರ ಕೋಟೆಯಲ್ಲಿ ನಡೆದಿದೆ.
ಮೃತಳನ್ನು ಜುಬೇರಾ ಹಾಗೂ ಶಬಾನು ಅವರ ಪುತ್ರಿ ಸುಹೀಬತ್ ಅಸ್ಲಮಿಯಾ ಎಂದು ಗುರುತಿಸಲಾಗಿದೆ. ಆಕೆಯ ತಂದೆ ನೀಡಿದ್ದ ದೂರಿನನ್ವಯ ಬಾಲಕಿ ನಿರಂತರವಾಗಿ ಮೊಬೈಲ್ ಫೋನ್‌ನಲ್ಲಿ ಗೇಮ್ ಆಡುವುದರಲ್ಲಿ ತಲ್ಲೀನಳಾಗಿರುತ್ತಿದ್ದಳು. ಹಾಗೆ ಮಾಡಬೇಡ ಎಂದರೂ ಕೇಳುತ್ತಿರಲಿಲ್ಲ. ಮೇ 15 ರ ಸಂಜೆ ಬಾಲಕಿಗೆ ದೂರುದಾರರಾದ ಜುಬೇದಾ ಹಾಗೂ ಆತನ ಪತ್ನಿ ಮೊಬೈಲ್‌ನಲ್ಲಿ ಆಟವಾಡುವುದನ್ನು ನಿಲ್ಲಿಸುವಂತೆ ಸಲಹೆ ನೀಡಿದರು ಮತ್ತು ಅವಳಿಂದ ಮೊಬೈಲ್ ಅನ್ನು ಕಸಿದುಕೊಂಡಿದ್ದಾರೆ. ಅದಾದ ನಂತರ ಬಾಲಕಿ ಮನೆಯ ಒಂದು ಮೂಲೆಯಲ್ಲಿ ಕುಳಿತಿದ್ದಳು.
ಆಗ ತಾಯಿ ನಮಾಜ್ ಮಾಡಲು ಹೋದರೆ ತಂದೆ ಸ್ನಾನಕ್ಕೆ ತೆರಳಿದ್ದರು. ನಮಾಜ್ ನಂತರ ತಾಯಿ ಆಗಮಿಸಿದಾಗ ಮಗಳು ಅಲ್ಲಿರಲಿಲ್ಲ.
ಅವಳನ್ನು ಹುಡುಕತೊಡಗಿದಾಗ ತಮ್ಮ ಮನೆಯಿಂದ ಸುಮಾರು 200 ಮೀಟರ್ ದೂರದಲ್ಲಿರುವ ಸರ್ಕಾರಿ ಬಾವಿಯ ಸಮೀಪ ಜನ ಸೇರಿರುವುದನ್ನು ಕಂಡಿದ್ದಾರೆ. ಆಗ ಅವರಿಗೆ ತಮ್ಮ ಮಗಳು ಬಾವಿಗೆ ಹಾರಿ ಪ್ರಾಣ ಕಳೆದುಕೊಳ್ಳಲು ಮುಂದಾಗಿದ್ದಾಳೆ ಎನ್ನುವುದು ಗೊತ್ತಾಗಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಅಸ್ಲಮಿಯಾಳನ್ನು ಬಾವಿಯಿಂದ ಎತ್ತುವಷ್ಟರಲ್ಲೇ ಆಕೆ ಕೊನೆಯುಸಿರೆಳೆದಿದ್ದಳು.
ಘಟನೆ ಸಂಬಂಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


