ಬೆಂಗಳೂರು: ಕೊರೋನಾ ಸೋಂಕಿತ ಕುಟುಂಬಕ್ಕೆ ನೆರೆಹೊರೆಯವರಿಂದ ಹಲ್ಲೆ, ಬೆದರಿಕೆ
ಕೊರೋನಾ ಸೋಂಕಿತ ತಮ್ಮ ಕುಟುಂಬಕ್ಕೆ ನೆರೆಹೊರೆಯವರು ಕಿರುಕುಳ ನೀಡಿ ಹಲ್ಲೆ ಮಾಡಿ ಬೆದರಿಸುತ್ತಿದ್ದಾರೆ ಎಂದು 20 ವರ್ಷದ ನರ್ಸಿಂಗ್ ವಿದ್ಯಾರ್ಥಿ ದೂರು ದಾಖಲಿಸಿದ್ದಾರೆ.

ಬೆಂಗಳೂರು: ಕೊರೋನಾ ಸೋಂಕಿತ ತಮ್ಮ ಕುಟುಂಬಕ್ಕೆ ನೆರೆಹೊರೆಯವರು ಕಿರುಕುಳ ನೀಡಿ ಹಲ್ಲೆ ಮಾಡಿ ಬೆದರಿಸುತ್ತಿದ್ದಾರೆ ಎಂದು 20 ವರ್ಷದ ನರ್ಸಿಂಗ್ ವಿದ್ಯಾರ್ಥಿ ದೂರು ದಾಖಲಿಸಿದ್ದಾರೆ.
ಇಂದಿರಾನಗರ ಠಾಣೆ ವ್ಯಾಪ್ತಿಯಲ್ಲಿ ಕೊರೊನಾ ಸೋಂಕಿತರ ಕುಟುಂಬಕ್ಕೆ ಜೀವ ಬೆದರಿಕೆ ಹಾಕಿ, ಸದಸ್ಯರೊಬ್ಬರ ಮೇಲೆ ಚಾಕುವಿನಿಂದ ಹಲ್ಲೆ ಮಾಡಲಾಗಿದೆ.
ಮೇ 14ರಂದು ರಾತ್ರಿ ಈ ಘಟನೆ ನಡೆದಿದೆ. ಪ್ರಿಯದರ್ಶಿನಿ ಎಂಬುವರು ದೂರು ನೀಡಿದ್ದಾರೆ. ಆರೋಪಿಗಳಾದ ಲಕ್ಷ್ಮಿಪುರದ ರಾಮ್, ಪ್ರಭು ಹಾಗೂ ಅರ್ಜುನ್ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ.
ಪ್ರಿಯದರ್ಶಿನಿ ಅವರು ತಂದೆ– ತಾಯಿ ಜೊತೆ ವಾಸವಿದ್ದಾರೆ. 2020ರ ಸೆಪ್ಟೆಂಬರ್‌ನಲ್ಲಿ ತಾಯಿಗೆ ಕೊರೊನಾ ಸೋಂಕು ತಗುಲಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಅವರು ಗುಣಮುಖರಾಗಿದ್ದರು. ಆದರೆ, ಅಕ್ಕ– ಪಕ್ಕದ ಕೆಲ ಮನೆಯವರು ಅವರಿಗೆ ಕಿರುಕುಳ ನೀಡಲಾರಂಭಿಸಿದ್ದರು. ‘ನಮಗೆ ಕೊರೊನಾ ಸೋಂಕು ತಂದು ಹಚ್ಚುತ್ತಿದ್ದಿರಾ’ ಎಂದು ಯಾವಾಗಲೂ ತೊಂದರೆ ಕೊಡುತ್ತಿದ್ದರು’ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಆರೋಪಿಗಳಾದ ರಾಮ್, ಪ್ರಭು ಹಾಗೂ ಅರ್ಜುನ್ ಸಹ ಪದೇ ಪದೇ ದೂರುದಾರ ಯುವತಿ ಮತ್ತು ಅವರ ಕುಟುಂಬದವರ ಜೊತೆ ಗಲಾಟೆ ಮಾಡುತ್ತಿದ್ದರು. ಇದೇ ಮೇ 14ರಂದು ಸಂಜೆ ಯುವತಿ ಮನೆ ಬಳಿ ಬಂದಿದ್ದ ಆರೋಪಿಗಳು, ಅವಾಚ್ಯ ಶಬ್ದಗಳಿಂದ ಬೈದಿದ್ದರು. ಅದನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ್ದರು.
ಇದೇ ಸಂದರ್ಭದಲ್ಲೇ ಚಾಕುವಿನಿಂದ ದೂರುದಾರ ಯುವತಿ ಕೈಗೂ ಆರೋಪಿಗಳು ಇರಿದಿದ್ದಾರೆ. ಮೂವರು ಆರೋಪಿಗಳು ಪರಾರಿಯಾಗಿದ್ದಾರೆ, ಪ್ರಕರಣ ದಾಖಲಿಸಿಕೊಂಡಿರುವ ಇಂದಿರಾನಗರ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


