ಹಾಸನ: ರೈಲಿಗೆ ಸಿಲುಕಿ 30 ವರ್ಷದ ಕಾಡಾನೆ ಸಾವು
ಒಂಟಿ ಸಲಗವೊಂದು ರೈಲಿಗೆ ಸಿಲುಕಿ ಮೃತಪಟ್ಟಿರುವ ದಾರುಣ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಬಾಳ್ಳುಪೇಟೆ ಬಳಿ ಮಂಗಳವಾರ ರಾತ್ರಿ ಸಂಭವಿಸಿದೆ.

ಹಾಸನ: ಒಂಟಿ ಸಲಗವೊಂದು ರೈಲಿಗೆ ಸಿಲುಕಿ ಮೃತಪಟ್ಟಿರುವ ದಾರುಣ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಬಾಳ್ಳುಪೇಟೆ ಬಳಿ ಮಂಗಳವಾರ ರಾತ್ರಿ ಸಂಭವಿಸಿದೆ.
ಬೆಂಗಳೂರಿನಿಂದ ಕಾರವಾರಕ್ಕೆ ಹೋಗುತ್ತಿದ್ದ ಬೆಂಗಳೂರು-ಕಾರವಾರ ಎಕ್ಸ್ಪ್ರೆಸ್ ರಾತ್ರಿ 12ರ ಸುಮಾರಿಗೆ ಹಸಡೆ ಬಳಿಯಿಂದ ಸಾಗುತ್ತದೆ. ಈ ವೇಳೆ ಅಡ್ಡ ಬಂದ ಆನೆಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಈ ದುಘರ್ಟನೆ ಸಂಭವಿಸಿದೆ.
ಗುಂಪಿನಿಂದ ಬೇರ್ಪಟಿದ್ದ 30 ವರ್ಷದ ಒಂಟಿ ಸಲಗ ಕೆಲ ದಿನಗಳಿಂದ ರೈಲ್ವೆ ಹಳಿ ಮೇಲೆ ಹಾಗೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಣಿಸಿಕೊಂಡಿತ್ತು. ಆ ಆನೆಯೇ ಇದಾಗಿರಬಹುದು ಎಂದು ಶಂಕಿಸಲಾಗಿದೆ.
ರೈಲ್ವೆ ಪೊಲೀಸರು ಮತ್ತು ತಾಂತ್ರಿಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಅರ್ಧ ಘಂಟೆಯ ನಂತರ ಗ್ರಾಮಸ್ಥರ ಸಹಾಯದಿಂದ ಆನೆಯ ಮೃತದೇಹವನ್ನು ಸ್ಥಳಾಂತರಿಸಿ ಟ್ರ್ಯಾಕ್ ತೆರವುಗೊಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


