ಕೋವಿಡ್ ಟೆಸ್ಟ್ ವರದಿ ಇಲ್ಲವೆಂದು ಆಡ್ಮಿಟ್ ಮಾಡಿಕೊಳ್ಳದ ಸಿಬ್ಬಂದಿ, ಆಸ್ಪತ್ರೆ ಮುಂದೆಯೇ ಮಗುವಿಗೆ ಜನ್ಮ ನೀಡಿದ ಮಹಿಳೆ!
ಕೋವಿಡ್-19 ಟೆಸ್ಟ್ ವರದಿ ಇಲ್ಲವೆಂದು ಆಸ್ಪತ್ರೆ ಸಿಬ್ಬಂದಿ ಆಡ್ಮಿಟ್ ಮಾಡಿಕೊಳ್ಳಲು ನಿರಾಕರಿಸಿದ ನಂತರ ಮಹಿಳೆಯೊಬ್ಬರು ಗುರುವಾರ ತಡರಾತ್ರಿ ಹಾಸನ ಜಿಲ್ಲೆಯ ಶಾಂತಿಗ್ರಾಮ ಪ್ರಾಥಮಿಕ ಆರೋಗ್ಯ ಘಟಕದ ಮುಂಭಾಗ ಮಗುವೊಂದಕ್ಕೆ ಜನ್ಮ ನೀಡಿರುವ ಘಟನೆ ನಡೆದಿದೆ.

ಹಾಸನ: ಕೋವಿಡ್-19 ಟೆಸ್ಟ್ ವರದಿ ಇಲ್ಲವೆಂದು ಆಸ್ಪತ್ರೆ ಸಿಬ್ಬಂದಿ ಆಡ್ಮಿಟ್ ಮಾಡಿಕೊಳ್ಳಲು ನಿರಾಕರಿಸಿದ ನಂತರ ಮಹಿಳೆಯೊಬ್ಬರು ಗುರುವಾರ ತಡರಾತ್ರಿ ಹಾಸನ ಜಿಲ್ಲೆಯ ಶಾಂತಿಗ್ರಾಮ ಪ್ರಾಥಮಿಕ ಆರೋಗ್ಯ ಘಟಕದ ಮುಂಭಾಗ ಮಗುವೊಂದಕ್ಕೆ ಜನ್ಮ ನೀಡಿರುವ ಘಟನೆ ನಡೆದಿದೆ.
ಆಕೆಗೆ ಹೆರಿಗೆ ನೋವು ಕಾಣಿಸಿಕೊಂಡ ನಂತರ ಮಹಿಳೆಯ ಪತಿ ಹಾಗೂ ಮಾವ ಹಲಸಿನಹಳ್ಳಿಯಿಂದ ಶಾಂತಿಗ್ರಾಮ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದಾರೆ. ತಡರಾತ್ರಿ 12-10ರ ಸುಮಾರಿನಲ್ಲಿ ಆಟೋರಿಕ್ಷಾದಲ್ಲಿಯೇ ಗಂಡು ಮಗುವಿಗೆ ಆ ಮಹಿಳೆ ಜನ್ಮ ನೀಡಿದ್ದಾರೆ.
ಸುದ್ದಿ ತಿಳಿದ ನಂತರ ಆಸ್ಪತ್ರೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ತಾಯಿ ಮತ್ತು ಶಿಶುವನ್ನು ಡೆಲಿವರಿ ವಾರ್ಡ್ ಗೆ ಸ್ಥಳಾಂತರಿಸಿದ್ದಾರೆ. ತಾಯಿ ಹಾಗೂ ಮಗು ಇಬ್ಬರು ಆರೋಗ್ಯದಿಂದ ಇರುವುದಾಗಿ ಮೂಲಗಳು ತಿಳಿಸಿವೆ.
ಆಸ್ಪತ್ರೆ ಮುಂಭಾಗ ಸೇರಿದ್ದ ಮಹಿಳೆಯ ಸಂಬಂಧಿಕರು ಹಾಗೂ ಗ್ರಾಮಸ್ಥರು, ಘಟನೆ ವಿರೋಧಿಸಿ ಪ್ರತಿಭಟನೆ ನಡೆಸಿದರು. ಘೋಷಣೆ ಕೂಗುವ ಮೂಲಕ ಆಸ್ಪತ್ರೆ ಸಿಬ್ಬಂದಿಯ ವರ್ತನೆಯನ್ನು ಖಂಡಿಸಿದರು. ಡ್ಯೂಟಿಯಲ್ಲಿದ್ದ ನರ್ಸ್ ಗಳನ್ನು ಅಮಾನತು ಮಾಡಬೇಕೆಂದು ಜಿಲ್ಲಾ ಆರೋಗ್ಯಾಧಿಕಾರಿಯನ್ನು ಒತ್ತಾಯಿಸಿದರು.
ಇಡೀ ಘಟನೆಯನ್ನು ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿರುವ ಆರೋಪದ ಮೇರೆಗೆ ಆಟೋ ರಿಕ್ಷಾ ಚಾಲಕನ ವಿರುದ್ಧ ಶಾಂತಿಗ್ರಾಮ ಪೊಲೀಸ್ ಠಾಣೆಯಲ್ಲಿ ರಾತ್ರಿ ಪಾಳಿಯಲ್ಲಿದ್ದ ನರ್ಸ್ ದೂರು ದಾಖಲಿಸಿದ್ದಾರೆ. ಆಸ್ಪತ್ರೆಗೆ ಬರುವ ಮುನ್ನವೇ ಮಹಿಳೆ ಮಗುವಿನ ಜನ್ಮ ನೀಡಿರುವುದಾಗಿ ನರ್ಸ್ ಒಬ್ಬರು ಹೇಳಿದ್ದಾರೆ.ಈ ಸಂಬಂಧ ಪ್ರತಿಕ್ರಿಯೆಗೆ ಜಿಲ್ಲಾ ಆರೋಗ್ಯಾಧಿಕಾರಿ ಸಿಗುತ್ತಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


