ರಾಜ್ಯ

ಕೋವಿಡ್-19: ರಾಜ್ಯದಲ್ಲಿ ಇಂದು ದಾಖಲೆಯ 61,766 ಮಂದಿ ಡಿಸ್ಚಾರ್ಜ್; 31,183 ಜನರಿಗೆ ಪಾಸಿಟಿವ್, 451 ಸಾವು

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕಡಿಮೆಯಾಗುತ್ತಿದ್ದು ಇಂದು ದಾಖಲೆಯ 61,766 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಆ ಮೂಲಕ ಚೇತರಿಕೆ ಸಂಖ್ಯೆ 18,91,042ಕ್ಕೆ ಏರಿಕೆಯಾಗಿದೆ.

ಕೋವಿಡ್-19: ರಾಜ್ಯದಲ್ಲಿ ಇಂದು ದಾಖಲೆಯ 61,766 ಮಂದಿ ಡಿಸ್ಚಾರ್ಜ್; 31,183 ಜನರಿಗೆ ಪಾಸಿಟಿವ್, 451 ಸಾವು
ಕೋವಿಡ್-19 ಟೆಸ್ಟಿಂಗ್ (ಸಂಗ್ರಹ ಚಿತ್ರ)
Published On :

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕಡಿಮೆಯಾಗುತ್ತಿದ್ದು ಇಂದು ದಾಖಲೆಯ 61,766 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಆ ಮೂಲಕ ಚೇತರಿಕೆ ಸಂಖ್ಯೆ 18,91,042ಕ್ಕೆ ಏರಿಕೆಯಾಗಿದೆ. 

ಮಹಾಮಾರಿಗೆ ಶನಿವಾರ ಒಂದೇ ದಿನ ಬರೋಬ್ಬರಿ 451 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 24,658ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 31,183 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 23,98,925ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 8,214 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 11,12,058ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 200 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.