ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರ ದುರ್ಮರಣ
ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ದುರ್ಮರಣಕ್ಕೀಡಾದ ಘಟನೆ ನಗರದ ಮಾರತ್ತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು: ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ದುರ್ಮರಣಕ್ಕೀಡಾದ ಘಟನೆ ನಗರದ ಮಾರತ್ತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತರನ್ನು ಜಂಬಣ್ಣ (37) ಭೀಮರಾವ್ (47) ಎಂದು ಗುರುತಿಸಲಾಗಿದ್ದು, ಅವರು ಗುಲ್ಬರ್ಗಾ ಮೂಲದವರು ಎನ್ನಲಾಗಿದೆ.
ಕೆಲಸ ಮಾಡುತ್ತಿದ್ದ ವೇಳೆ ಒಂದೇ ಸಮನೆ ಮಣ್ಣು ಕುಸಿದಿದ್ದು, ಏಳು ಕಾರ್ಮಿಕರು ಸಿಲುಕಿ ಹಾಕಿಕೊಂಡಿದ್ದರು. ಕೂಡಲೇ
ಇತರೆ ಐವರು ಕಾರ್ಮಿಕರನ್ನು ರಕ್ಷಿಸಲಾಗಿದೆ. ಆದರೆ, ಇಬ್ಬರು ಮಣ್ಣಿನಡಿ ಸಿಲುಕಿಕೊಂಡು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


