ಕಂದಾಯ ಇಲಾಖೆಯಿಂದ ಕೋವಿಡ್ ನಿಂದ ಮೃತರಾದ 1 ಸಾವಿರ ಮಂದಿ ಅಸ್ಥಿ ವಿಸರ್ಜನೆ: ಆರ್. ಅಶೋಕ್
ಕೊರೋನಾ ವೈರಸ್ ಸೋಂಕಿನಿಂದ ಮೃತಪಟ್ಟ ಸುಮಾರು 1 ಸಾವಿರ ಅನಾಥ ಶವಗಳ ಅಸ್ಥಿ ಸರಕಾರದ ಬಳಿ ಇದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಬೆಂಗಳೂರು: ಕೊರೋನಾ ವೈರಸ್ ಸೋಂಕಿನಿಂದ ಮೃತಪಟ್ಟ ಸುಮಾರು 1 ಸಾವಿರ ಅನಾಥ ಶವಗಳ ಅಸ್ಥಿ ಸರಕಾರದ ಬಳಿ ಇದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೋವಿಡ್ ನಿಂದ ಮೃತಪಟ್ಟವರ ಅಸ್ಥಿ ಸರ್ಕಾರದ ಬಳಿ ಇದೆ. ಅನಿವಾರ್ಯ ಅಥವಾ ಕಷ್ಟದಿಂದಲೋ ಕುಟುಂಬದವರು ಅಸ್ಥಿ ಸ್ವೀಕರಿಸಲು ಮುಂದೆ ಬರುತ್ತಿಲ್ಲ ಎಂದು ಹೇಳಿದ್ದಾರೆ.
ಮೃತರ ಸಂಬಂಧಿಕರು ಮೊಬೈಲ್ ಸ್ವಿಚ್ ಆಫ್ ಇದೆ. ನಾವು ಅಸ್ಥಿ ತೆಗೆದುಕೊಳ್ಳಲು ಮನವಿ ಮಾಡುತ್ತಿದ್ದೇವೆ. ಆದರೆ ಅವರವರ ಕಷ್ಟದಿಂದ ಅಸ್ಥಿ ಪಡೆಯುತ್ತಿಲ್ಲ. ಅಂತಹ ಅಸ್ಥಿಗಳನ್ನು ಸರ್ಕಾರವೇ ವಿಸರ್ಜಿಸಲು ತೀರ್ಮಾನಿಸಿದೆ ಎಂದು ಅಶೋಕ್ ಹೇಳಿದರು.
ಬಡವ ಬಲ್ಲಿದ ಎಂದು ಭೇದ ಭಾವ ಮಾಡದೇ ಅಸ್ಥಿಗಳನ್ನು ಪಂಚಭೂತಗಳಲ್ಲಿ ಲೀನವಾಗುವಂತೆ ವ್ಯವಸ್ಥೆ ಮಾಡಿದ್ದು, ನೀರಿನಲ್ಲಿ ಸಂಪ್ರದಾಯಬದ್ಧವಾಗಿ ಕಂದಾಯ ಇಲಾಖೆ ವತಿಯಿಂದ ಗೌರವಯುತವಾಗಿ ಸಂಸ್ಕಾರ ಮಾಡಲಿದ್ದೇವೆ ಎಂದು ತಿಳಿಸಿದರು.
ರಾಜ್ಯದಲ್ಲಿ ಈಗ ಆಮ್ಲಜನಕಯುಕ್ತ ಹಾಸಿಗೆಗಳು ಅಥವಾ ಆಮ್ಲಜನಕ ಕಾನ್ಸಂಟ್ರೇಟರ್ ಕೊರತೆಯಿಲ್ಲ, ಖಾಸಗಿ ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳ ಸಹಯೋಗದೊಂದಿಗೆ ವ್ಯವಸ್ಥೆಯನ್ನು ಸುಗಮಗೊಳಿಸಲಾಗಿದೆ ಎಂದು ಅಶೋಕ್ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


