ಕೋವಿಡ್ ವಿರುದ್ಧ ಸಮರ: ರೆಮ್ ಡೆಸಿವಿರ್ ಹಂಚಿಕೆಗೆ ಆನ್ ಲೈನ್ ವ್ಯವಸ್ಥೆ ಜಾರಿ
ರೆಮ್ ಡೆಸಿವಿರ್ ನ ಅಕ್ರಮ ಮಾರಾಟವನ್ನು ತಪ್ಪಿಸುವ ಸಲುವಾಗಿ ರೆಮ್ ಡೆಸಿವಿರ್ ಹಂಚಿಕ್ಗೆ ಪಾರದರ್ಶಕತೆ ತರಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಬೆಂಗಳೂರು: ರೆಮ್ ಡೆಸಿವಿರ್ ನ ಅಕ್ರಮ ಮಾರಾಟವನ್ನು ತಪ್ಪಿಸುವ ಸಲುವಾಗಿ ರೆಮ್ ಡೆಸಿವಿರ್ ಹಂಚಿಕ್ಗೆ ಪಾರದರ್ಶಕತೆ ತರಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ರೆಮ್ ಡೆಸಿವಿರ್ ಹಂಚಿಕೆಗಾಗಿ ಇನ್ನು ತಂತ್ರಜ್ಞಾನ ಆಧಾರಿತ ವ್ಯವಸ್ಥೆ ರೂಪಿಸಲಾಗಿದ್ದು ಸೋಂಕಿತ ವ್ಯಕ್ತಿಯ ಹೆಸರಿನಲ್ಲಿ ಯಾವ ಆಸ್ಪತ್ರೆಗೆ ಔಷಧ ಹಂಚಿಕೆ ಮಾಡಲಾಗಿದೆ ಎಂದು ಎಸ್.ಎಮ್.ಎಸ್.ಕಳುಹಿಸಲಾಗುತ್ತದೆ.
ಈ ಕುಯಿರುತಂತೆ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.
"ಸಾರ್ವಜನಿಕರು https://covidwar.karnataka.gov.in/service2 ಲಿಂಕ್ ಮೂಲಕ ತಮಗೆ ಹಂಚಿಕೆಯಾಗಿರುವ ಔಷಧದ ಬಗ್ಗೆ ಮಾಹಿತಿ ಪಡೆಯಬಹುದು.
"ಒಂದು ವೇಳೆ ಸೋಂಕಿತ ವ್ಯಕ್ತಿಯ SRF IDಗೆ ರೆಮ್ಡೆಸಿವಿರ್ ಔಷಧ ಹಂಚಿಕೆಯಾಗಿ ಆಸ್ಪತ್ರೆ ಅದನ್ನು ಆ ವ್ಯಕ್ತಿಯ ಚಿಕಿತ್ಸೆಗೆ ಒದಗಿಸದಿದ್ದಲ್ಲಿ ಇದೇ ಲಿಂಕ್ ಮೂಲಕ ಸರ್ಕಾರಕ್ಕೆ ವರದಿ ಮಾಡುವ ವ್ಯವಸ್ಥೆ ಕಲ್ಪಿಸಲಾಗಿದೆ.
"ಈ ಪಾರದರ್ಶಕ ವ್ಯವಸ್ಥೆಯಿಂದ ಕಾಳಸಂತೆ ಮಾರಾಟಕ್ಕೆ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕೋಣ." ಎಂದು ಸುಧಾಕರ್ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


