ಕೋವಿಡ್-19: ಬೆಂಗಳೂರಿನಲ್ಲಿ 5,701 ಸೇರಿ ರಾಜ್ಯದಲ್ಲಿ ಇಂದು 25,311 ಜನರಿಗೆ ಸೋಂಕು; 529 ಮಂದಿ ಸಾವು
ರಾಜ್ಯದಲ್ಲಿ ದಿನ ಕ್ರಮೇಣ ಕೊರೋನಾ ಪ್ರಕರಣಗಳು ಕಡಿಮೆಯಾಗುತ್ತಿದ್ದು ಇಂದು 25,311 ಜನರಿಗೆ ಸೋಂಕು ದೃಢಪಟ್ಟಿದೆ. 529 ಮಂದಿ ಸಾವನ್ನಪ್ಪಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ದಿನ ಕ್ರಮೇಣ ಕೊರೋನಾ ಪ್ರಕರಣಗಳು ಕಡಿಮೆಯಾಗುತ್ತಿದ್ದು ಇಂದು 25,311 ಜನರಿಗೆ ಸೋಂಕು ದೃಢಪಟ್ಟಿದೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 24,50,215ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 529 ಮಂದಿ ಕೊರೋನಾಗೆ ಬಲಿಯಾಗಿದ್ದು ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 25,811ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು 5,701 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 11,25,253ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿಗೆ 297 ಮಂದಿ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಕಡಿಮೆಯಾಗುತ್ತಿದ್ದು ಇಂದು ಬರೋಬ್ಬರಿ 57,333 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಆ ಮೂಲಕ ಚೇತರಿಕೆ ಸಂಖ್ಯೆ 19,83,948ಕ್ಕೆ ಏರಿಕೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


