ಖ್ಯಾತ ಭರತನಾಟ್ಯ ಕಲಾವಿದೆ ಬಿ. ಭಾನುಮತಿ ಕೊರೋನಾದಿಂದ ನಿಧನ
ಅಪ್ರತಿಮ ನೃತ್ಯ ಕಲಾವಿದೆ ಹಾಗೂ ನೃತ್ಯ ಗುರು ಬಿ. ಭಾನುಮತಿ ಅವರು ಸೋಮವಾರ ಕೊರೊನಾದಿಂದ ನಿಧನ ಹೊಂದಿದ್ದಾರೆ. ಕಳೆದ ಒಂದು ವಾರದಿಂದ ಅವರು ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದರು.

ಬೆಂಗಳೂರು: ಅಪ್ರತಿಮ ನೃತ್ಯ ಕಲಾವಿದೆ ಹಾಗೂ ನೃತ್ಯ ಗುರು ಬಿ. ಭಾನುಮತಿ ಅವರು ಸೋಮವಾರ ಕೊರೊನಾದಿಂದ ನಿಧನ ಹೊಂದಿದ್ದಾರೆ. ಕಳೆದ ಒಂದು ವಾರದಿಂದ ಅವರು ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದರು.
ಮೂಲತಃ ಕಲಾವಿದರ ಕುಟುಂಬದಿಂದಲೇ ಬಂದ ಬಿ. ಭಾನುಮತಿ ಭರತನಾಟ್ಯ ನೃತ್ಯ ಪ್ರಕಾರದಲ್ಲಿ ದೊಡ್ಡ ಹೆಸರು ಮಾಡಿದವರು. ರಾಷ್ಟ್ರೀಯ, ಅಂತರ ರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕ ಶಾಸ್ತ್ರೀಯ ನೃತ್ಯ ಸೌಂದರ್ಯವನ್ನು ಪಸರಿಸಿದ್ದರು.
ಅವರ 'ನೃತ್ಯ ಕಲಾ ಮಂದಿರಂ' ಶಾಲೆ ಮೂಲಕ ನೂರಾರು ನೃತ್ಯ ಕಲಾವಿದರನ್ನು ತಯಾರು ಮಾಡಿದ ಕೀರ್ತಿ ಭಾನುಮತಿ ಅವರಿಗೆ ಸಲ್ಲುತ್ತದೆ. ಅವರ ಸಂಯೋಜನೆಯ 'ಭರತಾಂಜಲಿ' ನೃತ್ಯ ರೂಪಕ ಅಮೆರಿಕ, ಬ್ರಿಟನ್ ಮುಂತಾದ ದೇಶಗಳಲ್ಲಿ ಪ್ರದರ್ಶಿತವಾಗಿ ಜನಪ್ರಿಯವಾಗಿದೆ.
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಕಲಾಶ್ರೀ ಪ್ರಶಸ್ತಿ, ಕೇಂದ್ರ ಸಂಗೀತ ನೃತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಅಸಂಖ್ಯ ಸನ್ಮಾನಗಳಿಗೆ ಭಾಜನರಾದ ಭಾನುಮತಿ ಅವರ ನಿಧನದಿಂದ ಕರ್ನಾಟಕ ಸಾಂಸ್ಕೃತಿಕ ಲೋಕ ದೊಡ್ಡ ನಷ್ಟ ಅನುಭವಿಸಿದೆ.
ಅರವಿಂದ ಲಿಂಬಾವಳಿ ಸಂತಾಪ:
ಕಲಾವಿದೆ ಬಿ. ಭಾನುಮತಿ ನಿಧನಕ್ಕೆ ಸಚಿವ ಅರವಿಂದ ಲಿಂಬಾವಳಿ ಸಂತಾಪ ಸೂಚಿಸಿದ್ದಾರೆ. ಭಗವಂತ ಅವರ ಆತ್ಮಕ್ಕೆ ಶಾಂತಿ ಕೊಡಲಿ, ಅವರ ಕುಟುಂಬಕ್ಕೆ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸಚಿವ ಅರವಿಂದ ಲಿಂಬಾವಳಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


