ರಾಜ್ಯ

ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ವಿಡಿಯೋದಲ್ಲಿರುವುದು ನಾನೇ, ಅದು ಸಹಮತದ ಲೈಂಗಿಕ ಸಂಪರ್ಕ- ರಮೇಶ್ ಜಾರಕಿಹೊಳಿ

ಬೆಳಗಾವಿ ಸಾಹುಕಾರ್ ರಾಸಲೀಲೆ ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.ಆರಂಭದಿಂದಲೂ ವಿಡಿಯೋದಲ್ಲಿರುವುದು ನಾನಲ್ಲ ಎಂದುಕೊಂಡೆ ಬಂದಿದ್ದ ಶಾಸಕ ರಮೇಶ್ ಜಾರಕಿಹೊಳಿ ಇದೀಗ ಉಲ್ಟಾ ಹೊಡೆದಿದ್ದು, ವಿಡಿಯೋದಲ್ಲಿರುವುದು ನಾನೇ. ಅದು ಸಹಮತದ ಲೈಂಗಿಕ ಸಂಪರ್ಕ ಎಂದಿದ್ದಾರೆ.

ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ವಿಡಿಯೋದಲ್ಲಿರುವುದು ನಾನೇ, ಅದು ಸಹಮತದ ಲೈಂಗಿಕ ಸಂಪರ್ಕ- ರಮೇಶ್ ಜಾರಕಿಹೊಳಿ
ರಮೇಶ್ ಜಾರಕಿಹೊಳಿ, ಸಿಡಿ ಲೇಡಿ
Published On :

ಬೆಂಗಳೂರು: ಬೆಳಗಾವಿ ಸಾಹುಕಾರ್ ರಾಸಲೀಲೆ ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.ಆರಂಭದಿಂದಲೂ ವಿಡಿಯೋದಲ್ಲಿರುವುದು ನಾನಲ್ಲ  ಎಂದುಕೊಂಡೆ ಬಂದಿದ್ದ ಶಾಸಕ ರಮೇಶ್ ಜಾರಕಿಹೊಳಿ ಇದೀಗ ಉಲ್ಟಾ ಹೊಡೆದಿದ್ದು, ವಿಡಿಯೋದಲ್ಲಿರುವುದು ನಾನೇ. ಅದು ಸಹಮತದ ಲೈಂಗಿಕ ಸಂಪರ್ಕ ಎಂದಿದ್ದಾರೆ.

ತನಿಖಾಧಿಕಾರಿ ಎಂ. ಸಿ. ಕವಿತಾ ಎದುರು ವಿಚಾರಣೆಗೆ ಹಾಜರಾಗಿದ್ದ ರಮೇಶ್ ಜಾರಕಿಹೊಳಿ ಈ ರೀತಿಯ ಹೇಳಿಕೆ ನೀಡಿದ್ದಾರೆ. 
ವೈದ್ಯಕೀಯ ಪರೀಕ್ಷೆಗೂ ಒಳಪಟ್ಟಿದ್ದಾರೆ ಎನ್ನಲಾಗಿದೆ.

ಪ್ರಾಜೆಕ್ಟ್ ವಿಚಾರವಾಗಿ ಯುವತಿ ನನ್ನನ್ನು ಭೇಟಿ ಮಾಡಿದ್ದಳು. ಆಕೆಯೊಂದಿಗೆ ಸಂಪರ್ಕದಲ್ಲಿ ಇದ್ದದ್ದು ನಿಜ. ಆದರೆ, ನನಗೆ ಗೊತ್ತಿಲ್ಲದಂತೆ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದಾರೆ. ಕಾಣದ ಕೈಗಳು ಷಡ್ಯಂತ್ರ ರೂಪಿಸಿ, ಹನಿಟ್ರ್ಯಾಪ್ ಗೆ ಬೀಳಿಸಿದ್ದಾರೆ. ತಮ್ಮ ಹೆಸರಿಗೆ ಕಳಂಕ ತಂದು ರಾಜಕೀಯವಾಗಿ ಮುಗಿಸುವ ಉದ್ದೇಶ ಇದರ ಹಿಂದಿದೆ ಎಂದು ಅವರು ತನಿಖಾಧಿಕಾರಿ ಮುಂದೆ ಹೇಳಿಕೊಂಡಿದ್ದಾರೆ.

ಸಹಮತದ ಲೈಂಗಿಕ ಸಂಪರ್ಕವನ್ನೇ ಅತ್ಯಾಚಾರವೆಂದು ಬಿಂಬಿಸಲು ಹೊರಟಿರುವವರನ್ನು ಪತ್ತೆ ಮಾಡಿ ಕಾನೂನು ಕ್ರಮ 
ಕೈಗೊಳ್ಳಬೇಕೆಂದು ರಮೇಶ್ ಜಾರಕಿಹೊಳಿ ಹೇಳಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.