ರೋಗಿಗಳನ್ನು ಕೋವಿಡ್ ಕೇರ್ ಕೇಂದ್ರಗಳಿಗೆ ಸ್ಥಳಾಂತರಿಸಲು ಗ್ರಾಮಗಳಿಗೆ ಸರ್ಕಾರದಿಂದ ಉಚಿತ ವಾಹನ ವ್ಯವಸ್ಥೆ
ಗ್ರಾಮೀಣ ಪ್ರದೇಶಗಳಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಳ್ಳಿಗಳಿಂದ ಕೊರೋನಾ ರೋಗಿಗಳನ್ನು ಕೋವಿಡ್ ಕೇರ್ ಕೇಂದ್ರಗಳಿಗೆ ಸ್ಥಳಾಂತರಿಸಲು ಸರ್ಕಾರ ವ್ಯವಸ್ಥೆ ಮಾಡುತ್ತಿದೆ.

ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಳ್ಳಿಗಳಿಂದ ಕೊರೋನಾ ರೋಗಿಗಳನ್ನು ಕೋವಿಡ್ ಕೇರ್ ಕೇಂದ್ರಗಳಿಗೆ ಸ್ಥಳಾಂತರಿಸಲು ಸರ್ಕಾರ ವ್ಯವಸ್ಥೆ ಮಾಡುತ್ತಿದೆ.
ಗ್ರಾಮಗಳಿಂದ ಕೋವಿಡ್ ಕೇರ್ ಕೇಂದ್ರಗಳಿಗೆ ರೋಗಿಗಳನ್ನು ಕರೆದೊಯ್ಯಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಉಚಿತವಾಗಿ ವಾಹನ ವ್ಯವಸ್ಥೆ ಮಾಡಲಿದೆ. ಖಾಸಗಿ ಸಹಭಾಗಿತ್ವದಲ್ಲಿ ವಾಹನ ಒದಗಿಸಲು ಅಧಿಕಾರಿಗಳು ಎದುರು ನೋಡುತ್ತಿದ್ದಾರೆ.
ರಾಜ್ಯದಲ್ಲಿ 6ಸಾವಿರ ಗ್ರಾಮ ಪಂಚಾಯಿತಿಗಳಿದ್ದು, ಮುಂದಿನ ಕೆಲ ತಿಂಗಳುಗಳಲ್ಲಿ ಸ್ಥಳೀಯ ಪಂಚಾಯಿತಿಗಳಿಗೆ ವಾಹನ ವ್ಯವಸ್ಥೆ ಮಾಡಲಾಗುವುದು, ಪಂಚಾಯತ್‌ಗಳು ಅವರಿಗೆ ನೀಡಲಾಗಿದ್ದ 50,000 ರೂಗಳನ್ನು ವಿವಿಧ ವೆಚ್ಚಗಳಿಗಾಗಿ ಬಳಸಿಕೊಳ್ಳಬಹುದು. ಇದಲ್ಲದೆ, ಸ್ಥಳೀಯ ಟಾಸ್ಕ್ ಫೋರ್ಸ್ ಸಮಿತಿಗಳಿಗೆ ಜನರಿಗೆ ಲಸಿಕೆ ಬರುವಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ನೀಡಲಾಗಿದೆ.
ಐಸಿಯು ಸ್ಥಾಪಿಸುವ ಬಗ್ಗೆಯೂ ರಾಜ್ಯ ಸರ್ಕಾರ ಗಮನಹರಿಸುತ್ತಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) 9 ಲಕ್ಷ ಕಿ.ಮೀ ಕ್ರಮಿಸಿರುವ ಬಸ್‌ಗಳನ್ನು ‘ಐಸಿಯು ಆನ್ ವೀಲ್ಸ್’ ಆಗಿ ಪರಿವರ್ತಿಸಿದ್ದು, ಇದು ಆಮ್ಲಜನಕವನ್ನು ಒದಗಿಸುತ್ತದೆ ಮತ್ತು ರೋಗಿಗಳನ್ನು ಮೇಲ್ವಿಚಾರಣೆ ಮಾಡುತ್ತದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮತ್ತು ಇತರ ರಾಜ್ಯ ರಸ್ತೆ ಸಾರಿಗೆ ನಿಗಮಗಳು ಇಂತಹ 100 ಬಸ್‌ಗಳನ್ನು ಅಭಿವೃದ್ಧಿಪಡಿಸಲಿದ್ದು, ಆಸ್ಪತ್ರೆ ವ್ಯವಸ್ಥೆ ಇಲ್ಲದ 100 ಹಿಂದುಳಿದ ಗ್ರಾಮಗಳಿಗೆ ನೀಡಲಾಗುವುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


