ರಾಜ್ಯ

ಮೊಬೈಲ್ ಹುಡುಕಿಕೊಡುವಂತೆ ಕೊಡಗು ಬಾಲಕಿ ಮನವಿ: ಶಂಕಿತ ನೌಕರನನ್ನು ವಶಕ್ಕೆ ಪಡೆದ ಪೊಲೀಸರು

ಕೋವಿಡ್ ನಿಂದ ಮೃತಪಟ್ಟ ಮಹಿಳೆಯ ಮೊಬೈಲ್ ಕಳವಿಗೆ ಸಂಬಂಧಪಟ್ಟಂತೆ ಮಡಿಕೇರಿ ಪೊಲೀಸರು ಶಂಕಿತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಮೊಬೈಲ್ ಹುಡುಕಿಕೊಡುವಂತೆ ಕೊಡಗು ಬಾಲಕಿ ಮನವಿ: ಶಂಕಿತ ನೌಕರನನ್ನು ವಶಕ್ಕೆ ಪಡೆದ ಪೊಲೀಸರು
ಸಾಂದರ್ಭಿಕ ಚಿತ್ರ
Published On :

ಮಡಿಕೇರಿ: ಕೋವಿಡ್ ನಿಂದ ಮೃತಪಟ್ಟ ಮಹಿಳೆಯ ಮೊಬೈಲ್ ಕಳವಿಗೆ ಸಂಬಂಧಪಟ್ಟಂತೆ ಮಡಿಕೇರಿ ಪೊಲೀಸರು ಶಂಕಿತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಕಳೆದ ಭಾನುವಾರ 9 ವರ್ಷದ ಬಾಲಕಿ ಕುಶಾಲನಗರದ ಹೃತಿಕ್ಷಾ ಜಿಲ್ಲಾಧಿಕಾರಿಗೆ ಮನವಿ ಮಾಡಿ, ಕೋವಿಡ್ ನಿಂದ ಮೃತಪಟ್ಟ ನನ್ನ ತಾಯಿಯ ಮೊಬೈಲ್ ನ್ನು ಹುಡುಕಿಕೊಡುವಂತೆ ಕೇಳಿಕೊಂಡಿದ್ದಳು. ಮೇ 16ರಂದು ಪ್ರಭಾ ಮಡಿಕೇರಿಯ ಕೋವಿಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.

ಆದರೆ ಆಕೆಯ ಫೋನ್ ಕಳೆದುಹೋಗಿತ್ತು. ಅದರಲ್ಲಿ ನನ್ನ ತಾಯಿಯ ನೆನಪುಗಳಿವೆ, ದಯವಿಟ್ಟು ಹುಡುಕಿಕೊಡಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಹೃತಿಕ್ಷಾ ಮತ್ತು ಆಕೆಯ ತಂದೆ ಮನವಿ ಮಾಡಿಕೊಂಡಿದ್ದು ಸುದ್ದಿಯಾಗಿತ್ತು.

ಬಾಲಕಿಯ ಮನವಿ ಮೇರೆಗೆ ಮಡಿಕೇರಿ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಈ ಹಿನ್ನೆಲೆಯಲ್ಲಿ ಆಸ್ಪತ್ರೆಯ ಡಿ ಗ್ರೂಪ್ ನೌಕರನನ್ನು ತನಿಖೆಗೆ ವಶಕ್ಕೆ ತೆಗೆದುಕೊಳ್ಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.