ರಾಜ್ಯದಲ್ಲಿ ಇಂದು ಕೊರೋನಾಗೆ 530 ಬಲಿ; 26,811 ಮಂದಿಗೆ ಪಾಸಿಟಿವ್; 40,741 ಡಿಸ್ಚಾರ್ಜ್!
ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾದರೂ ಮರಣ ಮೃದಂಗ ಮುಂದುವರೆದಿದ್ದು, ಮಹಾಮಾರಿಗೆ ಬುಧವಾರ ಒಂದೇ ದಿನ ಬರೋಬ್ಬರಿ 530 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 26,929ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾದರೂ ಮರಣ ಮೃದಂಗ ಮುಂದುವರೆದಿದ್ದು, ಮಹಾಮಾರಿಗೆ ಬುಧವಾರ ಒಂದೇ ದಿನ ಬರೋಬ್ಬರಿ 530 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 26,929ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 26,811 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 24,99,784ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು 6,433 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 11,37,929ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 285 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಇಂದು ಸಹ ಹೊಸ ಪಾಸಿಟಿವ್ ಪ್ರಕರಣಗಳಿಗಿಂತ ಹೆಚ್ಚು ಅಂದರೆ 40,741 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 20,62,910ಕ್ಕೆ ಏರಿಕೆಯಾಗಿದೆ. ಇನ್ನು 4,09,924 ಸಕ್ರೀಯ ಪ್ರಕರಣಗಳಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


