ಜುಲೈನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ: ಶೀಘ್ರದಲ್ಲೇ ದಿನಾಂಕ ನಿಗದಿ
ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಜುಲೈ ತಿಂಗಳಿನಲ್ಲಿ ನಡೆಸಲು ನಿರ್ಧರಿಸಲಾಗಿದ್ದು, ಶೀಘ್ರದಲ್ಲಿಯೇ ದಿನಾಂಕ ನಿಗದಿ ಮಾಡಲಾಗುತ್ತದೆ ಎಂದು ಪಿಯು ಬೋರ್ಡ್ ನಿರ್ದೇಶಕಿ ಆರ್ ಸ್ನೇಹಲ್ ಅವರು ತಿಳಿಸಿದ್ದಾರೆ.

ಬೆಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಜುಲೈ ತಿಂಗಳಿನಲ್ಲಿ ನಡೆಸಲು ನಿರ್ಧರಿಸಲಾಗಿದ್ದು, ಶೀಘ್ರದಲ್ಲಿಯೇ ದಿನಾಂಕ ನಿಗದಿ ಮಾಡಲಾಗುತ್ತದೆ ಎಂದು ಪಿಯು ಬೋರ್ಡ್ ನಿರ್ದೇಶಕಿ ಆರ್ ಸ್ನೇಹಲ್ ಅವರು ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ನಿಲುವಿನ ಬಗ್ಗೆ ಕೇಂದ್ರ ಸರ್ಕಾರಕ್ಕೆ ನೀಡಿದ ಸಲಹೆಯನ್ನು ಪಿಯು ಬೋರ್ಡ್ ನಿರ್ದೇಶಕಿ ಆರ್ ಸ್ನೇಹಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಮೇ.23ರಂದು ಹಲವು ರಾಜ್ಯಗಳ ಶಿಕ್ಷಣ ಸಚಿವರು ದ್ವಿತೀಯ ಪಿಯುಸಿ ಪರೀಕ್ಷೆ ಕುತಿರು ಸಭೆ ನಡೆಸಿದ್ದು, ಪ್ರಮುಖ ವಿಷಯಗಳಿಗೆ ಮಾತ್ರ ಪರೀಕ್ಷೆ ನಡೆಸುವಂತೆ ಸಿಬಿಎಸ್'ಸಿ ಸಲಹೆ ನೀಡಿದೆ. ಆದರೆ, ಪರೀಕ್ಷಾ ಪ್ರಕ್ರಿಯೆ ಪೂರ್ಣಗೊಳ್ಳಲು 75 ದಿನಗಳ ಅಗತ್ಯವಿದೆ. ಪರೀಕ್ಷೆ ಪಠ್ಯ, ಪ್ರಶ್ನೆ ಪತ್ರಿಕೆ ಸಿದ್ಧಪಡಿಸುವ ಪ್ರಕ್ರಿಯೆ ಈಗಾಗಲೇ ರಾಜ್ಯದಲ್ಲಿ ಪೂರ್ಣಗೊಂಡಿದೆ. ಈಗ ಮತ್ತೊಮ್ಮೆ ಪಠ್ಯ ಕಡಿತ, ಪ್ರಶ್ನೆಪತ್ರಿಕೆ ಬದಲಾವಣೆ ಮಾಡುವುದು ಕಷ್ಟಕರವಾಗುತ್ತದೆ. ಕೇಂದ್ರದ ಸಲಹೆ, ಸಭೆ ನಂತರ ಪರೀಕ್ಷಾ ಪದ್ಧತಿ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.
ಕೇಂದ್ರದ ಸಲಹೆ ಹಾಗೂ ಸಭೆ ಬಳಿಕ ಪರೀಕ್ಷಾ ಪದ್ದತಿ ಹಾಗೂ ಪಠ್ಯ ಕಡಿತದ ಬಗ್ಗೆ ಚಿಂತನೆ ಮಾಡಲಾಗಿದೆ. ಈಗಾಗಲೇ ಪ್ರಶ್ನೆ ಪತ್ರಿಕೆಗಳನ್ನು ಸಿದ್ದಪಡಿಸುವ ಪ್ರಕ್ರಿಯೆ ಪೂರ್ಣಗೊಂಡಿದೆ. ಜತೆಗೆ ಪಠ್ಯವನ್ನೂ ಸಹ ರೂಪಿಸಲಾಗಿದೆ. ಮತ್ತೆ ಈಗ ಪಠ್ಯ ಕಡಿತ ಪ್ರಶ್ನೆ ಪತ್ರಿಕೆ ಬದಲಾವಣೆ ಮಾಡುವುದು ಕಷ್ಟವಾಗುತ್ತದೆ ಎಂದಿರುವ ಅವರು, ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆಯ ನಂತರವೇ ವೃತ್ತಿಪರ ಕೋರ್ಸ್‌ಳಿಗೆ ಪ್ರವೇಶ ಪರೀಕ್ಷೆಗಳನ್ನು ನಡೆಸುವಂತೆ ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


