ಮೇಕೆದಾಟು ಯೋಜನೆ ಪರಿಶೀಲನೆಗೆ ಜಂಟಿ ಸಮಿತಿ ರಚನೆ; ಎನ್ ಜಿಟಿ ಆದೇಶ ಪ್ರಶ್ನಿಸಿ ಮೇಲ್ಮನವಿ: ಬೊಮ್ಮಾಯಿ
ಮೇಕೆದಾಟು ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲನೆಗೆ ಜಂಟಿ ಸಮಿತಿ ರಚಿಸುವ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ದಕ್ಷಿಣ ಶಾಖೆಯ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜು ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರು: ಮೇಕೆದಾಟು ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲನೆಗೆ ಜಂಟಿ ಸಮಿತಿ ರಚಿಸುವ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ದಕ್ಷಿಣ ಶಾಖೆಯ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜು ಬೊಮ್ಮಾಯಿ ಹೇಳಿದ್ದಾರೆ.
ಗುರುವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಅಡ್ವೊಕೇಟ್ ಜನರಲ್ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಮಾತನಾಡಿದ ಅವರು, ರಾಜ್ಯ ಸರ್ಕಾರ ಈ ನಿರ್ಧಾರ ಸರಿಯಿಲ್ಲ ಎಂದು ವಾದಿಸಲಿದೆ ಎಂದರು.
ಮೇಕೆದಾಟು ಸಮೀಪದ ರಸ್ತೆಗಳ ಕುರಿತ ವರದಿ ಆಧರಿಸಿ,ಈ ತೀರ್ಪು ನೀಡಲಾಗಿದೆ. ಇದು ಸರಿಯಲ್ಲ ಎಂದು ಬಸವರಾಜು ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದರು.
ಮೇಕೆದಾಟುವಿನಲ್ಲಿ ಅನಧಿಕೃತ ನಿರ್ಮಾಣ ಚಟುವಟಿಕೆಗಳ ಆರೋಪಕ್ಕೆ ಸಂಬಂಧಿಸಿದಂತೆ ಪರಿಶೀಲಿಸಲು ಜಂಟಿ ಸಮಿತಿಯೊಂದನ್ನು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ನೇಮಿಸಿದ್ದು, ಜುಲೈ 5ರೊಳಗೆ ವರದಿ ಸಲ್ಲಿಸುವಂತೆ ಸಮಿತಿಗೆ ನಿರ್ದೇಶಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


