ಬೆಂಗಳೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ಆರೋಪಿಗಳ ಮೇಲೆ ಫೈರಿಂಗ್; ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ- ಸಿಎಂ
ರಾಮಮೂರ್ತಿನಗರ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ, ರಾಮಮೂರ್ತಿನಗರ ಪೊಲೀಸರು ಇಬ್ಬರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿದ್ದಾರೆ.

ಬೆಂಗಳೂರು: ರಾಮಮೂರ್ತಿನಗರ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ, ರಾಮಮೂರ್ತಿನಗರ ಪೊಲೀಸರು ಇಬ್ಬರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿದ್ದಾರೆ.
ಪೊಲೀಸರು ಇಂದು ಬೆಳಗ್ಗೆ ಮಹಜರು ಮಾಡಲು ಆರೋಪಿಗಳನ್ನು ಅವರ ಮನೆಗೆ ಕರೆತಂದಿದ್ದರು. ಈ ವೇಳೆ ಆರೋಪಿಗಳು ಪೊಲೀಸರ ಮೇಲೆ ದಾಳಿ ನಡೆಸಿದ್ದಾರೆ. ಆಗ ಪೊಲೀಸರು ಆತ್ಮ ರಕ್ಷಣೆಗಾಗಿ ಆರೋಪಿಗಳ ಮೇಲೆ ಗುಂಡು ಹಾರಿಸಿದ್ದಾರೆ. ಇನ್ಸ್ಪೆಕ್ಟರ್ ಮತ್ತು ಸಬ್ ಇನ್ಸ್ಪೆಕ್ಟರ್ ಆರೋಪಿಗಳ ಕಾಲಿಗೆ ಗುಂಡು ಹಾರಿಸಿದ್ದಾರೆ ಎಂದು ತಿಳಿದು ಬಂದಿದೆ.
ಬಾಂಗ್ಲಾದೇಶದ 23 ವರ್ಷದ ಯುವತಿಯನ್ನು ರಾಮಮೂರ್ತಿನಗರದ ಮನೆಯೊಂದರಲ್ಲಿ ಕೆಲ ದಿನ ಹಿಂದೆ ಆರೋಪಿಗಳು ಅತ್ಯಾಚಾರ ಎಸಗಿದ್ದರು. ಅದರ ವಿಡಿಯೊವನ್ನು ಆರೋಪಿಗಳೇ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು. ವಿಡಿಯೊ ಆಧರಿಸಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದ ನಗರದ ಪೊಲೀಸರು, ನಾಲ್ವರು ಆರೋಪಿಗಳನ್ನು ಗುರುವಾರ ಸಂಜೆ ಬಂಧಿಸಿದ್ದರು.
ಬಾಂಗ್ಲಾದೇಶದ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಕೃತ್ಯ ಅಮಾನುಷ ಘಟನೆಯಾಗಿದ್ದು ಸೂಕ್ತ ಕಾನೂನು ಕ್ರಮ ಜರಗಿಸಲಾಗುವುದು ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, ಇದೊಂದು ಅಮಾನುಷವಾದ ಘಟನೆ. ಯಾರು ಸಹಿಸಲು ಸಾಧ್ಯವಿಲ್ಲ. ಆರೋಪಿಗಳಿಗೆ ಸರಿಯಾದ ರೀತಿಯ ಶಿಕ್ಷೆಯಾಗಬೇಕು. ಏನು ಕ್ರಮ ಕೈಗೊಳ್ಳಬೇಕೋ ಅದನ್ನು ಕೈಗೊಳ್ಳುತ್ತೇವೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


