ರಾಜ್ಯಪಾಲರನ್ನು ಭೇಟಿಯಾಗಿ ರಾಜ್ಯದ ಕೋವಿಡ್ ಪರಿಸ್ಥಿತಿ ವಿವರಿಸಿದ ಡಿಸಿಎಂ ಅಶ್ವತ್ಥ್ ನಾರಾಯಣ್, ಕಾರಜೋಳ
ರಾಜ್ಯದ ಕೋವಿಡ್ ಪರಿಸ್ಥಿತಿ ಹಾಗೂ ನಿರ್ವಹಣೆ ಬಗ್ಗೆ ರಾಜ್ಯ ಕೋವಿಡ್ ಕಾರ್ಯಪಡೆ ಮುಖ್ಯಸ್ಥರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಗುರುವಾರ ರಾಜ್ಯಪಾಲರನ್ನು ಭೇಟಿಯಾಗಿ ವಿವರಣೆ ನೀಡಿದರು.

ಬೆಂಗಳೂರು: ರಾಜ್ಯದ ಕೋವಿಡ್ ಪರಿಸ್ಥಿತಿ ಹಾಗೂ ನಿರ್ವಹಣೆ ಬಗ್ಗೆ ರಾಜ್ಯ ಕೋವಿಡ್ ಕಾರ್ಯಪಡೆ ಮುಖ್ಯಸ್ಥರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಗುರುವಾರ ರಾಜ್ಯಪಾಲರನ್ನು ಭೇಟಿಯಾಗಿ ವಿವರಣೆ ನೀಡಿದರು.
ಡಿಸಿಎಂ ಗೋವಿಂದ ಕಾರಜೋಳ ಅವರೊಂದಿಗೆ ರಾಜಭವನಕ್ಕೆ ತೆರಳಿದ ಡಾ.ಅಶ್ವತ್ಥನಾರಾಯಣ, ಈವರೆಗೂ ಸೋಂಕು ತಡೆಗಟ್ಟಲು ಲಾಕ್‌ಡೌನ್, ಲಸಿಕೆ ಅಭಿಯಾನ, ವೈದ್ಯಕೀಯ ಮೂಲಸೌಕರ್ಯ ಅಭಿವೃದ್ಧಿ, ಸಿಬ್ಬಂದಿ ನೇಮಕ ಸೇರಿದಂತೆ ಸರಕಾರ ಕೈಗೊಂಡಿರುವ ಎಲ್ಲ ಕ್ರಮಗಳ ಬಗ್ಗೆ ರಾಜ್ಯಪಾಲ ವಜೂಭಾಯಿ ವಾಲಾ ಅವರಿಗೆ ಸಮಗ್ರ ಮಾಹಿತಿ ನೀಡಿದರು.
ಲಾಕ್ಡೌನ್ ನಂತರ ರಾಜ್ಯದಲ್ಲಿ ಸೋಂಕಿನ ಪಾಸಿಟಿವಿಟಿ ದರವೂ ಕಡಿಮೆಯಾಗಿ ಸಾವಿನ ಪ್ರಮಾಣವೂ ಕಡಿಮೆಯಾಗಿದೆ. ಇದರ ಜತೆಯಲ್ಲೇ 45 ವರ್ಷ ಮೀರಿದ ಮುಂಚೂಣಿ ಕಾರ್ಯಕರ್ತರು ಹಾಗೂ ಆದ್ಯತಾ ಗುಂಪಿಗೆ ಲಸಿಕೆ ನೀಡವ ಕೆಲಸ ನಡೆಯುತ್ತಿದೆ. ಇಡೀ ರಾಜ್ಯಾದ್ಯಂತ ಆಮ್ಲಜನಕ, ಔಷಧಿ, ರೆಮಿಡಿಸಿವಿರ್ ಕೊರತೆಯನ್ನು ನೀಗಿಸಲಾಗಿದೆ ಎಂದು ಅಂಕಿ- ಅಂಶಗಳ ಸಹಿತ ರಾಜ್ಯಪಾಲರಿಗೆ ವಿವರಣೆ ಸಲ್ಲಿಸಿದರು.
ಬ್ಲ್ಯಾಕ್ ಫಂಗಸ್ ಬಗ್ಗೆಯೂ ರಾಜ್ಯಪಾಲರಿಗೆ ಮಾಹಿತಿ ನೀಡಿದ ಡಿಸಿಎಂ ಅವರು, ಈ ಕಾಯಿಲೆಗೆ ಸಂಬಂಧಿಸಿದ ಔಷಧಿಗಳ ಕೊರತೆ ನಿವಾರಣೆಗೆ ಎಲ್ಲ ಪ್ರಯತ್ನ ನಡೆದಿದೆ. ನಿರಂತರವಾಗಿ ಕೇಂದ್ರ ಸರಕಾರದ ಜತೆ ಸಂಪರ್ಕದಲ್ಲಿದ್ದು, ಇಡೀ ಸರಕಾರ ಒಂದು ತಂಡದ ರೂಪದಲ್ಲಿ ಕೆಲಸ ಮಾಡುತ್ತಿದೆ ಎಂದು ರಾಜ್ಯಪಾಲರಿಗೆ ತಿಳಿಸಿದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


