ರಾಜ್ಯ

ಕೊರೋನಾಗೆ ಕೊಪ್ಪಳದ ಪತ್ರಕರ್ತ ಬಲಿ

ಹೊಸದಿಗಂತ ದಿನ ಪತ್ರಿಕೆಯ ಜಿಲ್ಲಾ ವರದಿಗಾರರಾಗಿದ್ದ ತಿಪ್ಪನಗೌಡ ಮಾಲೀಪಾಟೀಲ್(40) ಅವರು ಕೋವಿಡ್ -19 ಸೋಂಕಿನಿಂದ ಗುರುವಾರ ರಾತ್ರಿ ನಿಧನರಾಗಿದ್ದಾರೆ.

ಕೊರೋನಾಗೆ ಕೊಪ್ಪಳದ ಪತ್ರಕರ್ತ ಬಲಿ
ಸಾಂದರ್ಭಿಕ ಚಿತ್ರ
Published On :

ಕೊಪ್ಪಳ: ಹೊಸದಿಗಂತ ದಿನ ಪತ್ರಿಕೆಯ ಜಿಲ್ಲಾ ವರದಿಗಾರರಾಗಿದ್ದ ತಿಪ್ಪನಗೌಡ ಮಾಲೀಪಾಟೀಲ್(40) ಅವರು ಕೋವಿಡ್ -19 ಸೋಂಕಿನಿಂದ ಗುರುವಾರ ರಾತ್ರಿ ನಿಧನರಾಗಿದ್ದಾರೆ.

ಕಳೆದ ಹತ್ತು ದಿನಗಳಿಂದ ನಗರದ ಕೆ.ಎಸ್. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಿಪ್ಪನಗೌಡ ಮಾಲೀಪಾಟೀಲ್ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಹಲವು ವರ್ಷಗಳಿಂದ ಹೊಸದಿಗಂತ ಪತ್ರಿಕೆಯ ಕೊಪ್ಪಳ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದರು. ಅವರ ಅಕಾಲಿಕ ನಿಧನಕ್ಕೆ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಶುಕ್ರವಾರ ಸಂತಾಪ ಸೂಚಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ವಾರ್ತಾಧಿಕಾರಿ ಸುರೇಶ, ಇಲಾಖೆಯ ಸಿಬ್ಬಂದಿ ಹಾಗೂ ಪತ್ರಕರ್ತರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.