ಆಕ್ಸಿಜನ್ ಸಿಲಿಂಡರ್ ಗಳ ಅಕ್ರಮ ಮಾರಾಟ: ಇಬ್ಬರ ಬಂಧನ
ದುಬಾರಿ ಬೆಲೆಗೆ ಆಕ್ಸಿಜನ್ ಸಿಲಿಂಡರ್ ಗಳನ್ನು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕೇಂದ್ರ ಅಪರಾಧ ದಳದ ಪೊಲೀಸರು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ.

ಬೆಂಗಳೂರು: ದುಬಾರಿ ಬೆಲೆಗೆ ಆಕ್ಸಿಜನ್ ಸಿಲಿಂಡರ್ ಗಳನ್ನು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕೇಂದ್ರ ಅಪರಾಧ ದಳದ ಪೊಲೀಸರು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ.
ಕೋಲಾರ ಜಿಲ್ಲೆ ರಾಬರ್ಟ್ ಸನ್ ಪೇಟೆಯ ಅರುಣ್ ಕುಮಾರ್ (34) ಹಾಗೂ ಆಡುಗೋಡಿಯ ಚಿನ್ನಯ್ಯನ ಪಾಳ್ಯದ ಸೈಯದ್ ಶಕೀಬ್ (27) ಬಂಧಿತ ಆರೋಪಿಗಳಾಗಿದ್ದಾರೆ.
ಆರೋಪಿಗಳಿಂದ 47 ಲೀಟರ್ 5 ಜಂಬೋ ಸಿಲಿಂಡರ್ ಹಾಗೂ ಎರಡು ಕಾರುಗಳನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಜಂಬೋ ಸಿಲಿಂಡರ್ ಗಳನ್ನು ಸರ್ಕಾರ ನಿಗದಿಪಡಿಸಿದ ಬೆಲೆಗಿಂತ ಹೆಚ್ಚಿನ ಮೊತ್ತಕ್ಕೆ ಕಾಳಸಂತೆಯಲ್ಲಿ ಮಾರಾಟ ಮಾಡಲು ದೊಡ್ಡಬಳ್ಳಾಪುರಕ್ಕೆ ಬೊಮ್ಮನಹಳ್ಳಿಯಿಂದ ಸಾಗಿಸುವಾಗ ಯಲಹಂಕ ಸಮೀಪ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


