ರಾಜ್ಯ

ರಾಜ್ಯದಲ್ಲಿ ಕೊರೋನಾ ಸೋಂಕು ಇಳಿಕೆ, ನಿಲ್ಲದ ಸಾವಿನ ಅಬ್ಬರ: ಇಂದು 492 ಬಲಿ, 20,628 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾದರೂ ಮರಣ ಮೃದಂಗ ಮುಂದುವರೆದಿದ್ದು, ಮಹಾಮಾರಿಗೆ ಇಂದು ಒಂದೇ ದಿನ ಬರೋಬ್ಬರಿ 492 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 28,298ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಸೋಂಕು ಇಳಿಕೆ, ನಿಲ್ಲದ ಸಾವಿನ ಅಬ್ಬರ: ಇಂದು 492 ಬಲಿ, 20,628 ಮಂದಿಗೆ ಪಾಸಿಟಿವ್
ಸಂಗ್ರಹ ಚಿತ್ರ
Published On :

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾದರೂ ಮರಣ ಮೃದಂಗ ಮುಂದುವರೆದಿದ್ದು, ಮಹಾಮಾರಿಗೆ ಇಂದು ಒಂದೇ ದಿನ ಬರೋಬ್ಬರಿ 492 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 28,298ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 20,628 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 25,67,449ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 4,889 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 11,54,503ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 278 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು ಸಹ ಹೊಸ ಪಾಸಿಟಿವ್ ಪ್ರಕರಣಗಳಿಗಿಂತ ಹೆಚ್ಚು ಅಂದರೆ 42,444 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 21,89,064ಕ್ಕೆ ಏರಿಕೆಯಾಗಿದೆ. ಇನ್ನು 3,50,066 ಸಕ್ರೀಯ ಪ್ರಕರಣಗಳಿವೆ.

ರಾಜ್ಯಾದ್ಯಂತ ಇಂದು 1,37,894 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 20,628 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 14.95ಕ್ಕೆ ಇಳಿದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.