ರೂ.11 ಸಾವಿರ ಕೋಟಿ ಜಿಎಸ್‍ಟಿ ಬಾಕಿ ಬಿಡುಗಡೆ ಮಾಡಿ: ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ
ರಾಜ್ಯ ಸರಕಾರಕ್ಕೆ ಕೇಂದ್ರದಿಂದ ಬರಬೇಕಾಗಿರುವ ಜಿಎಸ್‍ಟಿ ಪರಿಹಾರ ನಷ್ಟದ ಬಾಕಿ ಮೊತ್ತ ರೂ.11 ಸಾವಿರ ಕೋಟಿ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಜಿಎಸ್ಟಿ ಮಂಡಳಿಯ ರಾಜ್ಯ ಪ್ರತಿನಿಧಿ ಹಾಗೂ ಗೃಹ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಮಾಡಿದ್ದಾರೆ.

ಬೆಂಗಳೂರು: ರಾಜ್ಯ ಸರಕಾರಕ್ಕೆ ಕೇಂದ್ರದಿಂದ ಬರಬೇಕಾಗಿರುವ ಜಿಎಸ್‍ಟಿ ಪರಿಹಾರ ನಷ್ಟದ ಬಾಕಿ ಮೊತ್ತ ರೂ.11 ಸಾವಿರ ಕೋಟಿ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಜಿಎಸ್ಟಿ ಮಂಡಳಿಯ ರಾಜ್ಯ ಪ್ರತಿನಿಧಿ ಹಾಗೂ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಎಂರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಮಾಡಿದ್ದಾರೆ.
ಶುಕ್ರವಾರ ನಡೆದ ಜಿಎಸ್ಟಿ ಮಂಡಳಿಯ 43ನೆ ಸಭೆಯಲ್ಲಿ ಬೆಂಗಳೂರಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಿ ಬಸವರಾಜ ಬೊಮ್ಮಾಯಿಯವರು ಮಾತನಾಡಿದರು.
2021-22ನೆ ಸಾಲಿನ ಜಿಎಸ್ಟಿ ಪರಿಹಾರದ ನಷ್ಟದ ಹಣವನ್ನು ಕೇಂದ್ರ ಸರಕಾರವೇ ಸಾಲ ಪಡೆದು ರಾಜ್ಯಕ್ಕೆ ನೀಡಬೇಕು. 2020- 21ನೇ ಸಾಲಿನಲ್ಲಿ ರಾಜ್ಯಕ್ಕೆ ಬರಬೇಕಾಗಿರುವ ರೂ. 11 ಸಾವಿರ ಕೋಟಿ ಪರಿಹಾರವನ್ನು ಶೀಘ್ರದಲ್ಲಿ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ಜಿಎಸ್ಟಿ ಪರಿಹಾರ ಸೆಸ್‍ನಲ್ಲಿಯೂ ಬಾಕಿ ಉಳಿದಿರುವ ಹಣವನ್ನು ರಾಜ್ಯಕ್ಕೆ ಬಿಡುಗಡೆ ಮಾಡಬೇಕು. ಜಿಎಸ್ಟಿ ನಷ್ಟ ಪರಿಹಾರ ಒದಗಿಸುವ ಸೌಲಭ್ಯ 2021- 2022ಕ್ಕೆ ಮುಕ್ತಾಯಗೊಳ್ಳಲಿದೆ. ಆದರೆ, 2021- 2022ರ ನಂತರವೂ ಜಿಎಸ್'ಟಿ ನಷ್ಟ ಪರಿಹಾರ ಸೌಲಭ್ಯವನ್ನು ಮುಂದುವರಿಸುವ ಕುರಿತು ಚರ್ಚೆ ನಡೆಯಬೇಕು ಎಂದು ಅವರು ಒತ್ತಾಯ ಮಾಡಿದರು.
ಇದೇ ವೇಳೆ ದೇಶಾದ್ಯಂತ ಕೊರೋನಾ ವೈರಸ್ ಎರಡನೇ ಅಲೆಯ ಸಾಂಕ್ರಾಮಿಕದಿಂದ ತತ್ತರಿಸಿರುವ ಎಲ್ಲಾ ರಾಜ್ಯಗಳು ಅಗತ್ಯ ಸೇವೆಯಾದ ಕೋವಿಡ್- 19 ಔಷಧ ಸೇರಿದಂತೆ ವೈದ್ಯಕೀಯ ಪರಿಕರಗಳು ಹಾಗೂ ಆರೋಗ್ಯ ಸೇವೆಗಳ ಮೇಲಿನ ಜಿಎಸ್ಟಿ ದರವನ್ನು ಕಡಿತಗೊಳಿಸುವಂತೆ ಮನವಿ ಮಾಡಿದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


