ಸಿಡಿ ಕೇಸ್: ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಎಸ್ಐಟಿ ಕ್ಲೀನ್ ಚಿಟ್ ಸಾಧ್ಯತೆ
ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರ ಸಿಡಿ ಪ್ರಕರಣವನ್ನು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳದ ಅಧಿಕಾರಿಗಳು, ಸಾಕ್ಷ್ಯಾಧಾರ ಕೊರತೆ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿಯವರಿಗೆ ಕ್ಲೀನ್ ಚಿಟ್ ನೀಡಲು ಮುಂದಾಗಿದ್ದಾರೆಂದು ತಿಳಿದುಬಂದಿದೆ.

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರ ಸಿಡಿ ಪ್ರಕರಣವನ್ನು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳದ ಅಧಿಕಾರಿಗಳು, ಸಾಕ್ಷ್ಯಾಧಾರ ಕೊರತೆ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿಯವರಿಗೆ ಕ್ಲೀನ್ ಚಿಟ್ ನೀಡಲು ಮುಂದಾಗಿದ್ದಾರೆಂದು ತಿಳಿದುಬಂದಿದೆ.
ಪ್ರಕರಣ ಸಂಬಂಧ ಸಾಕ್ಷ್ಯಾಧಾರಗಳು ಸಿಗದ ಹಿನ್ನೆಲೆಯಲ್ಲಿ ಬಿ ರಿಪೋರ್ಟ್ ಸಲ್ಲಿಸಿ ಪ್ರಕರಣಕ್ಕೆ ಫುಲ್ ಸ್ಟಾಪ್ ಹಾಕಲು ಅಧಿಕಾರಿಗಳು ನಿರ್ಧರಿಸಿದ್ದಾರೆಂದು ಮೂಲಗಳು ತಿಳಿಸಿವೆ.
ಮಾರ್ಚ್ 26 ರಂದು ಮಹಿಳೆ ಪ್ರಕರಣ ದಾಖಲಿಸಿದ್ದು, ಈ ಹಿನ್ನೆಲೆಯಲ್ಲಿ ಜಾರಕಿಹೊಳಿ ವಿರುದ್ಧ 376 ಸಿ (ಅಧಿಕಾರದಲ್ಲಿದ್ದ ವ್ಯಕ್ತಿಯು ಲೈಂಗಿಕ ಸಂಭೋಗ), 354 ಎ (ಲೈಂಗಿಕ ಕಿರುಕುಳ), 504 (ಶಾಂತಿ ಪ್ರಚೋದನೆ), 506 (ಕ್ರಿಮಿನಲ್ ಬೆದರಿಕೆ), ಐಪಿಸಿಯ 417 (ಮೋಸ) ಮತ್ತು 67 ಎ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕಱಣ ಸಂಬಂಧ ಆರಂಭವಾಗಿದ್ದ ತನಿಖೆ ಪೂರ್ಣಗೊಂಡಿದೆ. ಜಾರಕಿಹೊಳಿ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳು ದೊರೆತಿಲ್ಲ. ಮಹಿಳೆಯೇ ಪದೇ ಪದೇ ಜಾರಿಹೊಳಿಯವರನ್ನು ಸಂಪರ್ಕಿಸಿದ್ದಾರೆ. ಸಾಕಷ್ಟು ಬಾರಿ ದೂರವಾಣಿ ಕರೆ ಮಾಡಿ ಪ್ರಚೋದನೆ ನೀಡುವ ರೀತಿಯಲ್ಲಿ ಮಾತನಾಡಿದ್ದಾರೆ. ಲಭ್ಯವಾಗಿರುವ ವಿಡಿಯೋದಲ್ಲಿ ಮಹಿಳೆಗೆ ಬಲವಂತ ಮಾಡಿರುವ, ದೌರ್ಜನ್ಯ ಎಸಗಿರುವ ಯಾವುದೇ ದೃಶ್ಯಗಳೂ ಕಂಡು ಬಂದಿಲ್ಲ. ಇಬ್ಬರ ಸಹಮತದಿಂದಲೇ ಕ್ರಿಯೆ ನಡೆದಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಪ್ರಕರಣ ಸಂಬಂಧ ಸಾಕಷ್ಟು ಜನರ ಹೇಳಿಕೆಯನ್ನೂ ಎಸ್ಐಟಿ ಅಧಿಕಾರಿಗಳು ದಾಖಲು ಮಾಡಿಕೊಂಡಿದ್ದಾರೆ. ವಿಡಿಯೋದಲ್ಲಿ ಇರುವುದು ನಾನಲ್ಲ. ವಿಡಿಯೋ ನಕಲಿ ಸೃಷ್ಟಿಯಾಗಿದೆ ಎಂದು ಇಷ್ಟು ದಿನ ಹೇಳಿಕೊಂಡು ಬಂದಿದ್ದ ಜಾರಕಿಹೊಳಿಯವರು ಕೆಲ ದಿನಗಳ ಹಿಂದಷ್ಟೇ ಎಸ್ಐಟಿ ಮುಂದೆ ಹಾಜರಾಗಿ ವಿಡಿಯೋದಲ್ಲಿರುವುದು ನಾನೇ ಎಂದು ಒಪ್ಪಿಕೊಂಡಿದ್ದಾರೆಂದು ಮೂಲಗಳು ತಿಳಿಸಿವೆ.
ಎಲ್ಲಾ ಬೆಳವಣಿಗೆ ಬಳಿಕ ಜಾರಕಿಹೊಳಿಯವರು ಹನಿ ಟ್ರ್ಯಾಪ್'ಗೆ ಒಳಗಾಗಿದ್ದಾರೆಂದು ಹೇಳಲಾಗುತ್ತಿದ್ದು, ಈ ಸಂಬಂಧ ಎಸ್ಐಟಿ ಅಧಿಕಾರಿಗಳೂ ನ್ಯಾಯಾಲಯಕ್ಕೆ ಶೀಘ್ರದಲ್ಲಿಯೇ ಬಿ ರಿಪೋರ್ಟ್ ಸಲ್ಲಿಸಲಿದ್ದಾರೆಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


