ರಾಜ್ಯ

ಕೋವಿಡ್ 19: ರಾಜ್ಯದಲ್ಲಿ ಇಂದು 382 ಬಲಿ, ಬೆಂಗಳೂರಿನಲ್ಲಿ 4,734 ಸೇರಿ 20,378 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದ್ದು ಇಂದು 20,378 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 25,87,827ಕ್ಕೆ ಏರಿಕೆಯಾಗಿದೆ.

ಕೋವಿಡ್ 19: ರಾಜ್ಯದಲ್ಲಿ ಇಂದು 382 ಬಲಿ, ಬೆಂಗಳೂರಿನಲ್ಲಿ 4,734 ಸೇರಿ 20,378 ಮಂದಿಗೆ ಪಾಸಿಟಿವ್
ಕೋವಿಡ್-19 ಟೆಸ್ಟಿಂಗ್ (ಸಂಗ್ರಹ ಚಿತ್ರ)
Published On :

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದ್ದು ಇಂದು 20,378 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 25,87,827ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 382 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 28,679ಕ್ಕೆ ಏರಿಕೆಯಾಗಿದೆ.ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 4,734 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 11,59,237ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 213 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು ಸಹ ಹೊಸ ಪಾಸಿಟಿವ್ ಪ್ರಕರಣಗಳಿಗಿಂತ ಹೆಚ್ಚು ಅಂದರೆ 28,053 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 22,17,117ಕ್ಕೆ ಏರಿಕೆಯಾಗಿದೆ. ಇನ್ನು 3,42,010 ಸಕ್ರೀಯ ಪ್ರಕರಣಗಳಿವೆ.

ರಾಜ್ಯಾದ್ಯಂತ ಇಂದು 1,38,809 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 20,378 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 14.68ಕ್ಕೆ ಇಳಿದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.