ಹುಬ್ಬಳ್ಳಿ: ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ನಿನ್ನ ಸಹವಾಸ ಬೇಡ ಎಂದು ಆತ್ಮಹತ್ಯೆಗೆ ಶರಣಾದ ಪತಿ!
ಎರಡು ಮಕ್ಕಳ ತಾಯಿಯಾದರೂ ಪರ ಪುರುಷನ ಜೊತೆ ಪತ್ನಿ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಕ್ಕೆ ಬೇಸತ್ತು ಪತಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಹುಬ್ಬಳ್ಳಿ: ಎರಡು ಮಕ್ಕಳ ತಾಯಿಯಾದರೂ ಪರ ಪುರುಷನ ಜೊತೆ ಪತ್ನಿ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಕ್ಕೆ ಬೇಸತ್ತು ಪತಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಹುಬ್ಬಳ್ಳಿಯ ಅಂಚಟಗೇರಿ ಗ್ರಾಮದಲ್ಲಿ ಘಟನೆ ನಡೆದಿದ್ದು ಮೃತನನ್ನು 42 ವರ್ಷದ ಬೂದಪ್ಪ ಕೋರಿ ಎಂದು ಗುರುತಿಸಲಾಗಿದೆ. ಬೂದಪ್ಪ ಕೋರಿ ಡೆತ್ ನೋಟ್ ಬರೆದಿಟ್ಟು ಮನೆಯಲ್ಲೇ ನೇಣು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಬೂದಪ್ಪನ ಪತ್ನಿ ಪಾರ್ವತಿ ಹುಬ್ಬಳ್ಳಿಯ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಬೂದಪ್ಪ ಕಳೆದ ಎರಡು ವರ್ಷಗಳ ಹಿಂದೆ ಪತ್ನಿಯನ್ನು ಕೆಲಸದಿಂದ ಬಿಡಿಸಿದ್ದನು. ಇದಾದ ಬಳಿಕ ಇಬ್ಬರ ನಡುವೆ ಜಗಳ ಕಾಯಂ ಆಗಿತ್ತು.
ಇನ್ನು ಪಾರ್ವತಿ ಗಂಡನ ಮನೆ ಬಿಟ್ಟು ತವರು ಮನೆಗೆ ಹೋಗಿದ್ದಳು. ಇದರ ನಡುವೆ ಪಾರ್ವತಿ ಕುಟುಂಬ ಬೂದಪ್ಪನ ವಿರುದ್ಧ ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಬೂದಪ್ಪನ ಕುಟುಂಬಸ್ಥರು ದೂರು ನೀಡಿದ್ದಾರೆ.
ಈ ಸಂಬಂಧ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


