ರಾಜ್ಯ

ಕೋವಿಡ್ ಸಾಂಕ್ರಾಮಿಕವನ್ನು ತಡೆಗಟ್ಟಲು 'ಸ್ವಯಂ ಶಿಸ್ತು' ಪರಿಣಾಮಕಾರಿ: ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ

ಕೋವಿಡ್-19 ವೈರಸ್ ಸಾಂಕ್ರಾಮಿಕವನ್ನು ತಡೆಗಟ್ಟಲು 'ಸ್ವಯಂ ಶಿಸ್ತು' ಪರಿಣಾಮಕಾರಿ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ಗೌರವ್ ಗುಪ್ತಾ ಶನಿವಾರ ಹೇಳಿದ್ದಾರೆ.

ಕೋವಿಡ್ ಸಾಂಕ್ರಾಮಿಕವನ್ನು ತಡೆಗಟ್ಟಲು 'ಸ್ವಯಂ ಶಿಸ್ತು' ಪರಿಣಾಮಕಾರಿ: ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ
ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ
Published On :

ಬೆಂಗಳೂರು: ಕೋವಿಡ್-19 ವೈರಸ್ ಸಾಂಕ್ರಾಮಿಕವನ್ನು ತಡೆಗಟ್ಟಲು 'ಸ್ವಯಂ ಶಿಸ್ತು' ಪರಿಣಾಮಕಾರಿ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ಗೌರವ್ ಗುಪ್ತಾ ಶನಿವಾರ ಹೇಳಿದ್ದಾರೆ.

ಈ ಹಿಂದೆ ಬೆಂಗಳೂರಿನಲ್ಲಿ 25-30 ಸಾವಿರದವರೆಗೂ ಏರಿಕೆಯಾಗಿದ್ದ ದೈನಂದಿನ ಹೊಸ ಸೋಂಕು ಪ್ರಕರಣಗಳ ಪ್ರಮಾಣ ಇದೀಗ ಗಣನೀಯವಾಗಿ ಇಳಿಕೆಯಾಗಿದೆ. ಹೊಸ ಪ್ರಕರಣಗಳ ಸಂಖ್ಯೆ ಕಡಿಮೆಯಾಗುವುದು ಉತ್ತಮ ಸಂಕೇತಾದರೂ, ಪ್ರಸ್ತುತ ಲಾಕ್ ಡೌನ್ ಜಾರಿಯಲ್ಲಿದೆ. ಲಾಕ್ ಡೌನ್ ತೆರವುಗೊಳಿಸಿದ  ಬಳಿಕವೂ ಸೋಂಕಿನ ಪ್ರಮಾಣ ಹೆಚ್ಚಾಗದಂತೆ ತಡೆಯಲು ಜನರಲ್ಲಿ 'ಸ್ವಯಂ ಶಿಸ್ತು' ಮೂಡಬೇಕು. ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವುದರಿಂದ ಕೋವಿಡ್ ಸಾಂಕ್ರಾಮಿಕವನ್ನು ತಡೆಗಟ್ಟ ಬಹುದು ಎಂದು ಹೇಳಿದ್ದಾರೆ.

ಇನ್ನು ನಗರದಲ್ಲಿ ಶನಿವಾರ 4,889 ಹೊಸ ಪ್ರಕರಣಗಳು ದಾಖಲಾಗಿವೆ. ಲಾಕ್ಡೌನ್ ಅನ್ನು ತೆಗೆದುಹಾಕಿದ ನಂತರ ಪ್ರಕರಣಗಳು ಮತ್ತೊಮ್ಮೆ ಗಗನಕ್ಕೇರದಂತೆ ನೋಡಿಕೊಳ್ಳಲು ನಾಗರಿಕರಿಂದ ಸ್ವಯಂ ಶಿಸ್ತು ಅತ್ಯಗತ್ಯ ಎಂದು ಮಾಧ್ಯಮ ವ್ಯಕ್ತಿಗಳೊಂದಿಗೆ ಮಾತನಾಡಿದ ಗುಪ್ತಾ ಹೇಳಿದರು.

ಆದ್ಯತೆಯ ಪಟ್ಟಿ ವರ್ಗದ ಫಲಾನುಭವಿಗಳಿಗೆ ಲಸಿಕೆ ಹಾಕಲು ಮತ್ತು ಕೊರಮಂಗಲದ ಸಿ.ಸಿ.ಸಿ ಯಲ್ಲಿ ಕಳಪೆ ಗುಣಮಟ್ಟದ ಆಹಾರವನ್ನು ಪೂರೈಸುತ್ತಿರುವ ಕುರಿತು ಮಾತನಾಡಿದ ಗೌರವ್ ಗುಪ್ತ ಅವರು ಈ ಬಗ್ಗೆ ತನಿಖೆಯನ್ನು ಪ್ರಾರಂಭಿಸಲಾಗುವುದು ಎಂದು ಹೇಳಿದರು.

ಅಂತೆಯೇ ಅಪಾರ್ಟ್ಮೆಂಟ್ ಫೆಡರೇಶನ್ ಸದಸ್ಯರೊಂದಿಗೆ ಸಭೆ ನಡೆಸಿದ ಗೌರವ್ ಗುಪ್ತಾ ಅವರು, ವ್ಯಾಕ್ಸಿನೇಷನ್ ಡ್ರೈವ್ ಅನ್ನು ಉದ್ಘಾಟಿಸಿದರು. ಅಪಾರ್ಟ್ಮೆಂಟ್, ಖಾಸಗಿ ಆಸ್ಪತ್ರೆಗಳ ಸಹಯೋಗದೊಂದಿಗೆ ನಿವಾಸಿಗಳಿಗೆ ಲಸಿಕೆ ನೀಡಲು ನಿರ್ಧರಿಸಿದ್ದು, 10,98,000 ನಾಗರಿಕರಿಗೆ ಲಸಿಕೆ ಸಿಗುತ್ತದೆ ಎಂದು  ಅವರು ಹೇಳಿದರು.ಅಲ್ಲದೆ ಮುಂದಿನ ದಿನಗಳಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಸ್ಥಳಗಳಲ್ಲಿಯೂ ವ್ಯಾಕ್ಸಿನೇಷನ್ ಡ್ರೈವ್‌ಗಳನ್ನು ನಡೆಸಲಾಗುವುದು ಎಂದು ಅವರು ಹೇಳಿದರು. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.