ರಾಜ್ಯ

ವಿಜಯಪುರ: ಭೀಮಾ ನದಿಯಲ್ಲಿ ನಾಲ್ವರು ಮಕ್ಕಳು ನೀರುಪಾಲು, ಓರ್ವ ಬಾಲಕಿ ಮೃತದೇಹ ಪತ್ತೆ

ನದಿಯಲ್ಲಿಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರುಪಾಲಾಗಿರುವ ಘಟನೆ ವಿಜಯಪುರ ಜಿಲ್ಲೆ ಮಹಾರಾಷ್ಟ್ರದ ಗಡಿಯ ಲವಗಿ ಗ್ರಾಮದಲ್ಲಿ ನಡೆದಿದೆ.

ವಿಜಯಪುರ: ಭೀಮಾ ನದಿಯಲ್ಲಿ ನಾಲ್ವರು ಮಕ್ಕಳು ನೀರುಪಾಲು, ಓರ್ವ ಬಾಲಕಿ ಮೃತದೇಹ ಪತ್ತೆ
ನೀರುಪಾಲಾದ ಮಕ್ಕಳು
Published On :

ವಿಜಯಪುರ: ನನದಿಯಲ್ಲಿಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರುಪಾಲಾಗಿರುವ ಘಟನೆ ವಿಜಯಪುರ ಜಿಲ್ಲೆ ಮಹಾರಾಷ್ಟ್ರದ  ಗಡಿಯ  ಲವಗಿ ಗ್ರಾಮದಲ್ಲಿ ನಡೆದಿದೆ. ನಿನ್ನೆ ಸಂಜೆ ಮಕ್ಕಳು ಭೀಮಾನದಿಯಲ್ಲಿ ಈಜಲು ತೆರಳಿದ್ದವರು ನಾಪತ್ತೆಯಾಗಿದ್ದು ಇದುವರೆಗೆ ಓರ್ವ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಇನ್ನೂ ಮೂವರಿಗಾಗಿ ಶೋಧ ನಡೆದಿದೆ.

ಲವಗಿ ಗ್ರಾಮದ ಶಿವಾನಂದ ಪಾರ್ಶೆಟ್ಟಿ ಅವರ ಮಕ್ಕಳಾದ ಆರತಿ(13), ವಿಠ್ಠಲ(10) ಹಾಗೂ ಶಿವಾಜಿ ತಾನವಡೆ ಎಂಬುವವರ ಮಕ್ಕಳಾದ ಸಮೀಕ್ಷಾ(14), ಅರ್ಪಿತಾ(13)  ನಿನ್ನೆ ಸಂಜೆ ನದಿಯಲ್ಲಿ ಈಜಲು ತೆರಳಿದ್ದರು. ಇವರ ಪೈಕಿ ಆರತಿ ಮೃತದೇಹ ಮಾತ್ರ ಸಿಕ್ಕಿದ್ದು ಇನ್ನೂ ಮೂವರು ಪತ್ತೆಯಾಗಿಲ್ಲ.

ಮನೆಯವರು ಕೆಲಸದಲ್ಲಿ ತೊಡಗಿದ್ದ ವೇಳೆ ಮಕ್ಕಳು ನದಿಯತ್ತ ತೆರಳಿದ್ದಾರೆ. ಆ ವೇಳೆ ನದಿಯಲ್ಲಿನ ನೀರಿನ ಸೆಳವಿಗೆ ಸಿಕ್ಕು ಕೊಚ್ಚಿ ಹೋಗಿದ್ದಾರೆಂದು ಶಂಕೆ ವ್ಯಕ್ತವಾಗಿದೆ.

ಘಟನೆ ಸಂಬಂಧ ಮಹಾರಾಷ್ಟ್ರದ ಮಂದ್ರೂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.