ಪ್ರಸಕ್ತ ಸಾಲಿನಲ್ಲಿ 30 ಲಕ್ಷ ರೈತರಿಗೆ 20,810 ಕೋಟಿ ರೂ. ಬೆಳೆ ಸಾಲ: ಸಚಿವ ಎಸ್.ಟಿ. ಸೋಮಶೇಖರ್
ಕಳೆದ ಸಾಲಿನಲ್ಲಿ ಸರ್ಕಾರ ಹೊಂದಿದ್ದ ಶೇ. 114.70 ರೈತರಿಗೆ ಬೆಳೆಸಾಲ ನೀಡುವ ಗುರಿಯನ್ನು ಮೀರಿ ಸಾಧನೆ ಮಾಡಿದ್ದು, 2021-22ರಲ್ಲಿ 30 ಲಕ್ಷ ರೈತರಿಗೆ 20,810 ಕೋಟಿ ರೂ. ಬೆಳೆ ಸಾಲ ನೀಡುವ ಗುರಿಯನ್ನು ಬ್ಯಾಂಕ್‌ಗಳಿಗೆ ನೀಡಿದ್ದೇವೆ ಎಂದು ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ತಿಳಿಸಿದರು.

ಬೆಂಗಳೂರು: ಕಳೆದ ಸಾಲಿನಲ್ಲಿ ಸರ್ಕಾರ ಹೊಂದಿದ್ದ ಶೇ. 114.70 ರೈತರಿಗೆ ಬೆಳೆಸಾಲ ನೀಡುವ ಗುರಿಯನ್ನು ಮೀರಿ ಸಾಧನೆ ಮಾಡಿದ್ದು, 2021-22ರಲ್ಲಿ 30 ಲಕ್ಷ ರೈತರಿಗೆ 20,810 ಕೋಟಿ ರೂ. ಬೆಳೆ ಸಾಲ ನೀಡುವ ಗುರಿಯನ್ನು ಬ್ಯಾಂಕ್‌ಗಳಿಗೆ ನೀಡಿದ್ದೇವೆ ಎಂದು ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ತಿಳಿಸಿದರು.
ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ರೈತಾಪಿ ವರ್ಗದವರಿಗೆ ತೊಂದರೆಯಾಗದಂತೆ ತಡೆಯಲು 30 ಲಕ್ಷ ರೈತರಿಗೆ ಹೆಚ್ಚಿನ ಸಾಲ ತಲುಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.
2020-21ರ ಆರ್ಥಿಕ ವರ್ಷದಲ್ಲಿ 24.50 ಲಕ್ಷ ರೈತರಿಗೆ 15400 ಕೋಟಿ ರೂಪಾಯಿ ಅಲ್ಪಾವಧಿ, ಮಧ್ಯಮಾವಧಿ ಹಾಗೂ ದೀರ್ಘಾವಧಿ ಸಾಲ ನೀಡಿಕೆಯ ಗುರಿಯನ್ನು ಹೊಂದಲಾಗಿತ್ತು. ಅಪೆಕ್ಸ್ ಬ್ಯಾಂಕ್ ಹಾಗೂ 21 ಡಿಸಿಸಿ ಬ್ಯಾಂಕ್ ಗಳು 25,93,982 ರೈತರಿಗೆ 17490 ಕೋಟಿ ರೂಪಾಯಿ ಸಾಲ ನೀಡಿವೆ ಎಂದು ವಿವರಿಸಿದರು.
ಲಾಕ್‌ಡೌನ್ ಮುಗಿದ ಬಳಿಕ ಡಿಸಿಸಿ ಬ್ಯಾಂಕ್‌ಗಳಿಗೆ ಭೇಟಿ:
ಸಾಲ ಸೌಲಭ್ಯ ಕುರಿತು 21 ಡಿಸಿಸಿ ಬ್ಯಾಂಕ್ ಗಳಿಗೆ ಈಗಾಗಲೇ ಸೂಚನೆಯನ್ನು ನೀಡಿದ್ದು, ಪ್ರಸಕ್ತ ಆರ್ಥಿಕ ವರ್ಷದಲ್ಲಿ 30 ಲಕ್ಷ ರೈತರನ್ನೂ ತಲುಪಬೇಕು, 20810 ಕೋಟಿ ರೂ. ಬೆಳೆ ಸಾಲವನ್ನು ನೀಡಬೇಕು ಎಂದು ಸೂಚಿಸಿದ್ದೇನೆ. ಲಾಕ್‌ಡೌನ್ ಮುಗಿದ ಬಳಿಕ ಡಿಸಿಸಿ ಬ್ಯಾಂಕ್‌ಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ, ಸಲಹೆ-ಸೂಚನೆಗಳನ್ನು ನೀಡಲಿದ್ದೇನೆ. ಕಳೆದ ಬಾರಿ 5-6 ಡಿಸಿಸಿ ಬ್ಯಾಂಕ್ ಗಳು ಶೇ. 100 ಗುರಿ ಮುಟ್ಟಲು ಸಾಧ್ಯವಾಗಿಲ್ಲ. ಈ ವೇಳೆ ಅವರಿಗೂ ಸಹ ಗುರಿ ಮುಟ್ಟಲೇಬೇಕು ಎಂದು ಸೂಚನೆಯನ್ನು ನೀಡಿದ್ದಾಗಿ ತಿಳಿಸಿದರು.
ರೈತರಿಗೆ ನೂರಕ್ಕೆ ನೂರು ಸಾಲ ಸಿಗಬೇಕು:
ಡಿಸಿಸಿ ಬ್ಯಾಂಕ್ ಗಳು ತಮಗೆ ನೀಡಿರುವ ಗುರಿಯನ್ನು ತಲುಪಲೇಬೇಕು. ಯಾವುದೇ ಕಾರಣಕ್ಕೂ ಇದರಿಂದ ತಪ್ಪಿಸಿಕೊಳ್ಳಬಾರದು. ರೈತರಿಗೆ ನೂರಕ್ಕೆ ನೂರು ಸಾಲ ಸಿಗಬೇಕು. 21 ಡಿಸಿಸಿ ಬ್ಯಾಂಕ್ ಗಳ ಪ್ರಗತಿ ಪರಿಶೀಲನೆಯನ್ನೂ ಮಾಡಲಿದ್ದು, 30 ಲಕ್ಷ ರೈತರಿಗೆ 20810 ಕೋಟಿ ರೂಪಾಯಿ ಬೆಳೆ ಸಾಲ ದೊರೆಯುವಂತೆ ನೋಡಿಕೊಳ್ಳಲಾಗುವುದು ಎಂದರು.
ಡಿಸಿಸಿ ಬ್ಯಾಂಕ್ ಗಳಿಗೆ ಅಪೆಕ್ಸ್ ಬ್ಯಾಂಕ್ ನಿಂದ ಸಹಕಾರ:
ಕಳೆದ ಬಾರಿ ಏನು ಗುರಿ ಇತ್ತು? ಎಷ್ಟು ಸಾಧನೆ ಮಾಡಲಾಗಿದೆ? ಈ ಬಾರಿ ಎಷ್ಟು ಗುರಿಯನ್ನು ನೀಡಬಹುದು ಎಂಬುದನ್ನು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ತುಷಾರ್ ಗಿರಿನಾಥ್ ಹಾಗೂ ಸಹಕಾರ ಸಂಘಗಳ ನಿಬಂಧಕರಾದ ಜಿಯಾವುಲ್ಲ ಅವರು ಖುದ್ದು ಎಲ್ಲ ಡಿಸಿಸಿ ಬ್ಯಾಂಕ್ ಗಳ ಜೊತೆಗೆ ಚರ್ಚಿಸಿ ಗುರಿಯನ್ನು ನಿಗದಿಪಡಿಸಿದ್ದಾರೆ. ಅಲ್ಲದೆ, ಶೇ. 100 ಗುರಿ ಸಾಧನೆ ಮಾಡಿದ ಡಿಸಿಸಿ ಬ್ಯಾಂಕ್ ಗಳಿಗೆ ಧನ್ಯವಾದಗಳನ್ನು ಸಲ್ಲಿಸಿದ್ದೇವೆ. ಡಿಸಿಸಿ ಬ್ಯಾಂಕ್ ಗಳಿಗೆ ಅಪೆಕ್ಸ್ ಬ್ಯಾಂಕ್ ನಿಂದ ಆಗಬೇಕಾದ ಎಲ್ಲ ಸೌಲಭ್ಯಗಳನ್ನು ಮಾಡಿಕೊಡಲಾಗುವುದು ಎಂದು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರು, ಶಾಸಕರಾದ ಬೆಳ್ಳಿ ಪ್ರಕಾಶ್ ಅವರ ಸಮ್ಮುಖದಲ್ಲಿ ತಿಳಿಸಿದ್ದೇವೆ ಎಂದರು.
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರು, ಶಾಸಕ ಬೆಳ್ಳಿ ಪ್ರಕಾಶ್, ಸರ್ಕಾರದ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್, ಸಹಕಾರ ಸಂಘಗಳ ನಿಬಂಧಕರಾದ ಜಿಯಾವುಲ್ಲ, ಎಲ್ಲ ಡಿಸಿಸಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


