ಕರ್ನಾಟಕದಿಂದ ರೋಹಿಂಗ್ಯಾಗಳನ್ನು ಗಡಿಪಾರು ಮಾಡಲ್ಲ ಎಂದಿದ್ದ ಸರ್ಕಾರ, ಈಗ 'ಸುಪ್ರೀಂ' ಆದೇಶಕ್ಕೆ ಬದ್ಧ ಎಂದಿದೆ!
ಕರ್ನಾಟಕದಲ್ಲಿ 126 ರೋಹಿಂಗ್ಯಾ ವಲಸಿಗರನ್ನು ಪತ್ತೆ ಹಚ್ಚಲಾಗಿದೆ. ಅವರನ್ನು ಯಾವುದೇ ಶಿಬಿರ ಅಥವಾ ಬಂಧನ ಕೇಂದ್ರದಲ್ಲಿ ರಾಜ್ಯ ಪೊಲೀಸರು ಇಟ್ಟಿಲ್ಲ ಎಂದು ಸುಪ್ರೀಂ ಕೋರ್ಟ್ ಗೆ ರಾಜ್ಯ ಸರ್ಕಾರ ತಿಳಿಸಿದೆ.

ಬೆಂಗಳೂರು: ಕರ್ನಾಟಕದಲ್ಲಿ 126 ರೋಹಿಂಗ್ಯಾ ವಲಸಿಗರನ್ನು ಪತ್ತೆ ಹಚ್ಚಲಾಗಿದೆ. ಅವರನ್ನು ಯಾವುದೇ ಶಿಬಿರ ಅಥವಾ ಬಂಧನ ಕೇಂದ್ರದಲ್ಲಿ ರಾಜ್ಯ ಪೊಲೀಸರು ಇಟ್ಟಿಲ್ಲ ಎಂದು ಸುಪ್ರೀಂ ಕೋರ್ಟ್ ಗೆ ರಾಜ್ಯ ಸರ್ಕಾರ ತಿಳಿಸಿದೆ.
ರೋಹಿಂಗ್ಯಾ ಸಮಸ್ಯೆ ಕುರಿತಂತೆ ಬಿಜೆಪಿ ಮುಖಂಡ ಅಶ್ವಿನಿ ಉಪಾಧ್ಯಾಯ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ವರ್ಷದೊಳಗೆ ಬಾಂಗ್ಲಾದೇಶಿಗರು, ರೋಹಿಂಗ್ಯಾಗಳು, ಕಾನೂನುಬಾಹಿರ ವಲಸಿಗರು ಮತ್ತು ನುಸುಳುಕೋರರನ್ನು ಗುರುತಿಸಿ ಅವರನ್ನು ಬಂಧಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿರುವಂತೆ ಕೋರಿ ಅಶ್ವಿನಿ ಉಪಾಧ್ಯಾಯ ಸುಪ್ರೀಂನಲ್ಲಿ ಮನವಿ ಸಲ್ಲಿಸಿದ್ದರು. ಇದಕ್ಕೂ ಮುನ್ನ ಉಪಾಧ್ಯಾಯ ಅವರ ಮನವಿಯು ನಿರ್ವಹಣೆಗೆ ಅರ್ಹವಾಗಿಲ್ಲ ಎಂದು ಕರ್ನಾಟಕ ಸರ್ಕಾರ ತಗಾದೆ ಎತ್ತಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿ ಅಫಿಡವಿಟ್ ಸಲ್ಲಿಸಿರುವ ರಾಜ್ಯ ಸರ್ಕಾರ, ಸುಪ್ರೀಂ ಕೋರ್ಟ್ ಹೊರಡಿಸುವ ಆದೇಶಕ್ಕೆ ಬದ್ಧವಾಗಿರುವುದಾಗಿ ತಿಳಿಸಿದೆ. ಅಲ್ಲದೆ, ತನ್ನ ವ್ಯಾಪ್ತಿಗೆ ಒಳಪಡುವ ಯಾವುದೇ ಶಿಬಿರ ಅಥವಾ ಬಂಧನ ಕೇಂದ್ರದಲ್ಲಿ ರೋಹಿಂಗ್ಯಾಗಳಿಗೆ ಕರ್ನಾಟಕ ನೆಲೆ ಕಲ್ಪಿಸಿಲ್ಲ. ರಾಜ್ಯ ಸರ್ಕಾರವು 126 ರೋಹಿಂಗ್ಯಾಗಳನ್ನು ಪತ್ತೆ ಹಚ್ಚಿದ್ದು, ಈ ಸಂಬಂಧ ಸುಪ್ರೀಂ ಕೋರ್ಟ್ ಆದೇಶವನ್ನು ಚಾಚೂ ತಪ್ಪದೆ ಪಾಲಿಸಲಾಗುವುದು ಎಂದು ಗೃಹ ಇಲಾಖೆಯ ಅಧೀನ ಕಾರ್ಯದರ್ಶಿ ವನಜಾ ಕೆ ಎನ್ ಸಲ್ಲಿಸಿರುವ ಅಫಿಡವಿಟ್ ನಲ್ಲಿ ತಿಳಿಸಿದ್ದಾರೆ.
ಅಗತ್ಯವೆನಿಸಿದರೆ ಮುಂದಿನ ಹಂತದಲ್ಲಿ ವಿಸ್ತೃತವಾದ ಅಫಿಡವಿಟ್ ಸಲ್ಲಿಸಲು ಅವಕಾಶ ಕಲ್ಪಿಸಬೇಕು ಎಂದು ರಾಜ್ಯ ಸರ್ಕಾರವು ನ್ಯಾಯಾಲಯವನ್ನು ಕೋರಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


