ಪುನೀತ್ ಗೆ ಮರಣೋತ್ತರವಾಗಿ ಪದ್ಮಶ್ರೀ ಪ್ರಶಸ್ತಿ ನೀಡಬೇಕು: ಪ್ರಧಾನಿಗೆ ಸಿದ್ದರಾಮಯ್ಯ ಮನವಿ
ಶುಕ್ರವಾರ ನಿಧನರಾದ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಪದ್ಮಶ್ರಿ ಪ್ರಶಸ್ತಿ ನೀಡಬೇಕೆಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಮನವಿ ಮಾಡಿದ್ದಾರೆ.

ಬೆಂಗಳೂರು: ಶುಕ್ರವಾರ ನಿಧನರಾದ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಪದ್ಮಶ್ರಿ ಪ್ರಶಸ್ತಿ ನೀಡಬೇಕೆಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಮನವಿ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಯಾವ ಪ್ರಶಸ್ತಿ ಗೌರವಗಳಿಗಿಂತಲೂ ಪುನೀತ್ ರಾಜ್ ಕುಮಾರ್ ಜನತೆಯಿಂದ ಗಳಿಸಿರುವ ಪ್ರೀತಿ- ಅಭಿಯಾನ ದೊಡ್ಡದು ಎಂದಿದ್ದಾರೆ.
ಪುನೀತ್ ರಾಜ್ ಕುಮಾರ್ ಬದುಕಿದ್ದರೆ ತನ್ನ ನಟನೆ ಮತ್ತು ಸಾಮಾಜಿಕ ಕಾಳಜಿಯಿಂದಾಗಿ ಖಂಡಿತ ಪಡೆಯುತ್ತಿದ್ದ ಪದ್ಮಶ್ರಿ ಪ್ರಶಸ್ತಿಯನ್ನು ಅವರಿಗೆ ಮರಣೋತ್ತರವಾಗಿ ನೀಡಬೇಕೇಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


