ಪುನೀತ್ ಗೆ ಮರಣೋತ್ತರವಾಗಿ ಪ್ರತಿಷ್ಠಿತ 'ಬಸವಶ್ರೀ ಪ್ರಶಸ್ತಿ: ಶಿವಮೂರ್ತಿ ಮುರುಘಾ ಶರಣರು
ಕಳೆದ ಶುಕ್ರವಾರ ನಿಧನರಾದ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಪ್ರತಿಷ್ಠಿತ 'ಬಸವಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ತಿಳಿಸಿದ್ದಾರೆ.

ಚಿತ್ರದುರ್ಗ: ಕಳೆದ ಶುಕ್ರವಾರ ನಿಧನರಾದ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಪ್ರತಿಷ್ಠಿತ 'ಬಸವಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ತಿಳಿಸಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಬಸವ ಜಯಂತಿಯಂದು ಮರಣೋತ್ತರವಾಗಿ ಪುನೀತ್ ರಾಜ್ ಕುಮಾರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಹೇಳಿದರು.
ಪುನೀತ್ ರಾಜ್ ಕುಮಾರ್ 'ಬಾಲನಟ, ನಾಯಕ ನಟ, ಹಿನ್ನೆಲೆ ಗಾಯಕ ಹಾಗೂ ನಿರ್ಮಾಪಕರಾಗಿ ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಸಾಮಾಜಿಕ ಜಾಗೃತಿಯ ಪ್ರಚಾರಕರಾಗಿಯೂ ಸಮಾಜ ಸೇವೆ ಸಲ್ಲಿಸಿದ್ದಾರೆ. ಮಾನವೀಯ ಮೌಲ್ಯಗಳನ್ನು ಹೊಂದಿದ್ದ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.
ಪ್ರಶಸ್ತಿಯು 5 ಲಕ್ಷ ನಗದು ಹಾಗೂ ಫಲಕವನ್ನು ಒಳಗೊಂಡಿದೆ. ನವೆಂಬರ್ 10 ರಂದು ಶರಣರು ಪುನೀತ್ ರಾಜ್ ಕುಮಾರ್ ಮನೆಗೆ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


