ರಾಜ್ಯದಲ್ಲಿ ಇಂದು ಕೊರೋನಾದಿಂದ 5 ಸಾವು: 261 ಹೊಸ ಪ್ರಕರಣ ಪತ್ತೆ, 296 ಚೇತರಿಕೆ
ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 261 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,89,275ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 261 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,89,275ಕ್ಕೆ ಏರಿಕೆಯಾಗಿದೆ. 261 ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸದ್ಯ 8,267 ಸಕ್ರಿಯ ಪ್ರಕರಣಗಳಿರುವುದಾಗಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸೋಂಕಿನಿಂದ ಇಂದು 5 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ಒಟ್ಟಾರೇ ಮೃತರ ಸಂಖ್ಯೆ 38,095ಕ್ಕೆ ಏರಿಕೆಯಾಗಿದೆ. ಸೋಂಕಿನ ಪ್ರಮಾಣ ಶೇ. 0.48 ರಷ್ಟಿದ್ದು, ಮರಣ ಪ್ರಮಾಣ ಶೇ. 1.91 ರಷ್ಟಿದೆ. ಬೆಂಗಳೂರಿನಲ್ಲಿ 157 ಹೊಸ ಪ್ರಕರಣ ಪತ್ತೆಯಾಗಿದ್ದು, 171 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಬ್ಬರು ಮೃತಪಟ್ಟಿದ್ದಾರೆ.
ಬಾಗಲಕೋಟೆ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಗದಗ್, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿಯಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


