ರಾಜ್ಯ

ದಾವಣಗೆರೆ: 246 ಕ್ವಿಂಟಾಲ್ ಅಕ್ರಮ ಪಡಿತರ ಅಕ್ಕಿ ವಶ

ಅಕ್ರಮವಾಗಿ 246 ಕ್ವಿಂಟಾಲ್ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿಯನ್ನು ನಗರದ ಹೊರ ವಲಯದ ಬಾಡಾ ಕ್ರಾಸ್ ಸಮೀಪ ಬೈಪಾಸ್ ರಸ್ತೆಯಲ್ಲಿ ವಶಕ್ಕೆ ಪಡೆಯಲಾಗಿದೆ.

ದಾವಣಗೆರೆ: 246 ಕ್ವಿಂಟಾಲ್ ಅಕ್ರಮ ಪಡಿತರ ಅಕ್ಕಿ ವಶ
ಸಾಂದರ್ಭಿಕ ಚಿತ್ರ
Published On :

ದಾವಣಗೆರೆ: ಅಕ್ರಮವಾಗಿ 246 ಕ್ವಿಂಟಾಲ್ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿಯನ್ನು ನಗರದ ಹೊರ ವಲಯದ ಬಾಡಾ ಕ್ರಾಸ್ ಸಮೀಪ ಬೈಪಾಸ್ ರಸ್ತೆಯಲ್ಲಿ ವಶಕ್ಕೆ ಪಡೆಯಲಾಗಿದೆ.

ಅಕ್ರಮವಾಗಿ ಲಾರಿಯಲ್ಲಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಡಿಸಿಆರ್ ಬಿ ಘಟಕದ ಪೊಲೀಸ್ ಡಿವೈಎಸ್ಪಿ ಬಸವರಾಜ್ ನೇತೃತ್ವದ ಪೊಲೀಸ್ ತಂಡ ದಾಳಿ ಮಾಡಿದೆ.

ದಾಳಿಯಲ್ಲಿ 246 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ಮತ್ತು 01 ಲಾರಿಯನ್ನು ವಶಪಡಿಸಿಕೊಂಡಿದ್ದು, ಈ ಸಂಬಂಧ ಒಬ್ಬ ಆರೋಪಿತನನ್ನು ಬಂಧಿಸಲಾಗಿದೆ.

ಅಕ್ಕಿ ಮತ್ತು ಲಾರಿ ಮೌಲ್ಯ ಮಾಪನ ಮಾಡಲಾಗುತ್ತಿದೆ. ಈ ಸಂಬಂಧ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಘಟನೆಯನ್ನು ಭೇದಿಸಿದ ತಂಡವನ್ನು ದಾವಣಗೆರೆ ಎಸ್ಪಿ ಸಿಬಿ ರಿಷ್ಯಂತ್ ಅಭಿನಂದಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.