ಬೆಂಗಳೂರಿನಲ್ಲಿ ಭಾರೀ ಮಳೆ ಹಿನ್ನೆಲೆ: ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ತುರ್ತು ಸಭೆ
ಬೆಂಗಳೂರಿನಲ್ಲಿ ಕಳೆದ ಒಂದು ತಿಂಗಳಿನಿಂದ ಸುರಿಯುತ್ತಿರುವ ಮಳೆ ಹಾಗೂ ಅದರಿಂದ ಉಂಟಾಗಿರುವ ಸಮಸ್ಯೆ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಅಧಿಕಾರಿಗಳ ಸಭೆ ನಡೆಯಿತು.

ಬೆಂಗಳೂರು: ಬೆಂಗಳೂರಿನಲ್ಲಿ ಕಳೆದ ಒಂದು ತಿಂಗಳಿನಿಂದ ಸುರಿಯುತ್ತಿರುವ ಮಳೆ ಹಾಗೂ ಅದರಿಂದ ಉಂಟಾಗಿರುವ ಸಮಸ್ಯೆ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಅಧಿಕಾರಿಗಳ ಸಭೆ ನಡೆಯಿತು. ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಛ ನಾರಾಯಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಚರಂಡಿಯಲ್ಲಿ ನೀರು ಹರಿಯದೆ ಹೊರ ಬಂದು ಸಮಸ್ಯೆಯಾಗಿದೆ. ನಗರೋತ್ಥಾನ ಯೋಜನೆಯಡಿ ತಡೆಗೋಡೆ ನಿರ್ಮಾಣ ಮಾಡಲಾಗುವುದು. ತಡೆಗೋಡೆಯಿಂದ ಆಗುತ್ತಿರುವ ಸಮಸ್ಯೆ ಪರಿಹಾರಕ್ಕೆ ಆದ್ಯತೆ ಕೊಡಲಾಗುವುದು. ಮನೆಗಳಿಗೆ ನೀರು ನುಗ್ಗದಂತೆ ತುರ್ತು ಕ್ರಮಕ್ಕೆ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.
ಬೆಂಗಳೂರಿಗೆ 4 ಎಸ್ಡಿಆರ್ಎಫ್ ಮೀಸಲಿಡಲು ಆದೇಶ ನೀಡಲಾಗಿದೆ. ಇನ್ನೂ ಮೂರ್ನಾಲ್ಕು ದಿನಗಳ ಕಾಲ ಮಳೆಯಾಗಬಹುದು. ಯಾವ ಪ್ರದೇಶದಲ್ಲಿ ಹೆಚ್ಚು ಸಮಸ್ಯೆ ಎಂದು ಗುರುತಿಸಿದ್ದೇವೆ. ಬೆಂಗಳೂರಿನ ಪಶ್ಚಿಮ ವಲಯದಲ್ಲಿ ಹೆಚ್ಚು ಸಮಸ್ಯೆ ಆಗಿದೆ. ತುರ್ತಾಗಿ ಕ್ರಮ ಕೈಗೊಳ್ಳಲು ಈಗ 64 ರಕ್ಷಣಾ ತಂಡಗಳಿವೆ. ಒಂದೊಂದು ತಂಡದಲ್ಲಿ 14 ಜನ ಇದ್ದು, ಇದನ್ನು 30ಕ್ಕೆ ಏರಿಸಬೇಕು, ಕಂದಾಯ ಇಲಾಖೆಯಿಂದ ಇವರಿಗೆ ಅನುದಾನ ನೀಡಲಾಗುವುದು ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


