ರಾಜ್ಯ

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ? ಇಂದು ಕ್ಯಾಬಿನೆಟ್ ಮೀಟಿಂಗ್

ಸಿಂದಗಿಯಲ್ಲಿನ ಗೆಲುವು ಆಡಳಿತರೂಢ ಬಿಜೆಪಿ ಪಕ್ಷಕ್ಕೆ ಹುಮ್ಮಸ್ಸು ನೀಡಿದ್ದರೆ, ಹಾನಗಲ್ ನಲ್ಲಿನ ಸೋಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹಿನ್ನಡೆಗೆ ಕಾರಣವಾಗಿದೆ. ಇಂತಹ ಸಂದರ್ಭದಲ್ಲಿ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಅತ್ಯಂತ ಮಹತ್ವ ಪಡೆದುಕೊಂಡಿದೆ.

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ? ಇಂದು ಕ್ಯಾಬಿನೆಟ್ ಮೀಟಿಂಗ್
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Published On :

ಬೆಂಗಳೂರು: ಸಿಂದಗಿಯಲ್ಲಿನ ಗೆಲುವು ಆಡಳಿತರೂಢ ಬಿಜೆಪಿ ಪಕ್ಷಕ್ಕೆ ಹುಮ್ಮಸ್ಸು ನೀಡಿದ್ದರೆ, ಹಾನಗಲ್ ನಲ್ಲಿನ ಸೋಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹಿನ್ನಡೆಗೆ ಕಾರಣವಾಗಿದೆ. ಇಂತಹ ಸಂದರ್ಭದಲ್ಲಿ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಅತ್ಯಂತ ಮಹತ್ವ ಪಡೆದುಕೊಂಡಿದೆ. 

ಇವತ್ತು ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕ್ಯಾಬಿನೆಟ್ ಮೀಟಿಂಗ್ ನಡೆಯಲಿದೆ. ಸಭೆಯಲ್ಲಿ ಸಚಿವ ಸಂಪುಟದ ಎಲ್ಲ ಸಹೋದ್ಯೋಗಿಗಳು ಭಾಗವಹಿಸುವ ನಿರೀಕ್ಷೆ ಇದೆ. ಇನ್ನು ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ ನೂತನ ಮರಳು ನೀತಿ ಜಾರಿ, ಹಾನಗಲ್ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸೋಲಿನ ಪರಾಮರ್ಶೆ ಕೂಡ ಇಂದು ಸಿಎಂ ಅಧ್ಯಕ್ಷತೆಯಲ್ಲಿ ಬಿಸಿಬಿಸಿ ಚರ್ಚೆಗೆ ಕಾರಣವಾಗಲಿದೆ. 

ಅಲ್ಲದೆ, ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ನಡೆಸುವುದು ಸೇರಿದಂತೆ ಇನ್ನಿತರ ವಿಚಾರಗಳ ಬಗ್ಗೆ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗೆ ಬರುವ ಸಾಧ್ಯತೆ ಇದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.