ಚಂದ್ರಶೇಖರ ಕಂಬಾರ, ಡಾ. ಬಿ.ಎಂ.ಹೆಗ್ಡೆಗೆ ಪದ್ಮ ಭೂಷಣ, ಹಾಜಬ್ಬ, ವಿಜಯ್ ಸಂಕೇಶ್ವರ್ಗೆ ಪದ್ಮಶ್ರೀ ಪ್ರಶಸ್ತಿ
ನಾಡಿನ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಲವು ಮಹನೀಯರಿಗೆ 2020ನೇ ಸಾಲಿನ ಪದ್ಮ ಪ್ರಶಸ್ತಿಗಳನ್ನು ಸೋಮವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪ್ರದಾನ ಮಾಡಿದರು.

ನವದೆಹಲಿ: ನಾಡಿನ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಲವು ಮಹನೀಯರಿಗೆ 2020ನೇ ಸಾಲಿನ ಪದ್ಮ ಪ್ರಶಸ್ತಿಗಳನ್ನು ಸೋಮವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪ್ರದಾನ ಮಾಡಿದರು.
ಕನ್ನಡಿಗ ಖ್ಯಾತ ವೈದ್ಯ ಡಾ.ಬಿ.ಎಂ.ಹೆಗ್ಡೆ ಹಾಗೂ ಸಾಹಿತಿ ಚಂದ್ರಶೇಖರ ಕಂಬಾರ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ನೀಡಲಾಗಿದೆ.
ದಕ್ಷಿಣ ಕನ್ನಡದ ಅಕ್ಷರ ಸಂತ’ ಹರೇಕಳ ಹಾಜಬ್ಬ, ಕನ್ನಡತಿ ಮಂಜಮ್ಮ ಜೋಗತಿ, ರಂಗಸ್ವಾಮಿ ಲಕ್ಷ್ಮೀನಾರಾಯಣ ಕಶ್ಯಪ್, ಪರಿಸರ ಪ್ರೇಮಿ ತುಳಸಿ ಗೋವಿಂದೇಗೌಡ, ಮಾಜಿ ಹಾಕಿ ಪಟು ಎಂಪಿ ಗಣೇಶ್ ಮತ್ತು ಉದ್ಯಮಿ ವಿಜಯ್ ಸಂಕೇಶ್ವರ್ ಅವರು ರಾಷ್ಟ್ರಪತಿಗಳಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದರು.
ವಿವಿಧ ಕ್ಷೇತ್ರದ 119 ಸಾಧಕರಿಗೆ 7 ಪದ್ಮವಿಭೂಷಣ, 10 ಪದ್ಮಭೂಷಣ ಮತ್ತು 102 ಪದ್ಮಶ್ರೀ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ಪ್ರಖ್ಯಾತ ಗಾಯಕ ಎಸ್ .ಪಿ. ಬಾಲ ಸುಬ್ರಹ್ಮಣ್ಯಂ ಅವರಿಗೆ ಮರಣೋತ್ತರವಾಗಿ ಪದ್ಮ ವಿಭೂಷಣ ಪ್ರಶಸ್ತಿ ನೀಡಲಾಯಿತು.
ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಮರಣೋತ್ತರವಾಗಿ ಪದ್ಮವಿಭೂಷಣ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದು, ಅವರ ಪುತ್ರಿ ಬಾನ್ಸುರಿ ಸ್ವರಾಜ್ ಪ್ರಶಸ್ತಿ ಸ್ವೀಕರಿಸಿದರು.
ಒಲಿಂಪಿಯನ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು ಪದ್ಮಭೂಷಣ ಪ್ರಶಸ್ತಿ, ಐಸಿಎಂಆರ್ ಮಾಜಿ ಮುಖ್ಯ ವಿಜ್ಞಾನಿ ಡಾ ರಾಮನ್ ಗಂಗಾಖೇಡ್ಕರ್, ನಟಿ ಕಂಗನಾ ರಣಾವತ್ ಅವರಿಗೆ ಪದ್ಮಶ್ರೀ, ಪ್ರಶಸ್ತಿ ನೀಡಲಾಯಿತು.ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೊದಲಾದ ಗಣ್ಯರು ಭಾಗಿಯಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


