ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿಗೆ ನ್ಯಾಯಾಂಗ ಬಂಧನ
ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದ ಪ್ರಕರಣದಲ್ಲಿ ಬಂಧಿಸಲಾಗಿದ್ದ ಅಂತರರಾಷ್ಟ್ರೀಯ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯನ್ನು 14 ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬೆಂಗಳೂರು: ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದ ಪ್ರಕರಣದಲ್ಲಿ ಬಂಧಿಸಲಾಗಿದ್ದ ಅಂತರರಾಷ್ಟ್ರೀಯ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯನ್ನು 14 ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಇನ್ನೊಬ್ಬ ಆರೋಪಿ ವಿಷ್ಣು ಭಟ್‌ನನ್ನು ಮುಂದಿನ 4 ದಿನಗಳವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಜೀವನ್‌ಬಿಮಾನಗರ ಠಾಣೆ ವ್ಯಾಪ್ತಿಯ ಹೋಟೆಲ್‌ನಲ್ಲಿ ವಾಸವಿದ್ದ ಆರೋಪಿಗಳು, ಸಿಬ್ಬಂದಿ ಹಾಗೂ ವ್ಯವಸ್ಥಾಪಕನ ಮೇಲೆ ಹಲ್ಲೆ ಮಾಡಿದ್ದರು. ವ್ಯವಸ್ಥಾಪಕ ನೀಡಿದ್ದ ದೂರಿನಡಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ, ಆರೋಪಿಗಳು ಮಾದಕ ದ್ರವ್ಯ ಸೇವಿಸಿದ್ದು ಗೊತ್ತಾಗಿತ್ತು.
ಎನ್‌ಡಿಪಿಎಸ್ ಕಾಯ್ದೆಯಡಿಯೂ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಇಬ್ಬರ ಮನೆಗಳ ಮೇಲೂ ದಾಳಿ ಮಾಡಿದ್ದರು. ಡ್ರಗ್ಸ್ ಸಹ ಪತ್ತೆ ಹಚ್ಚಿದ್ದರು. ‘ಆರೋಪಿ ವಿಷ್ಣು ಭಟ್‌ನ ಇಂದಿರಾನಗರದ ಮನೆಯಲ್ಲಿ ಡ್ರಗ್ಸ್ ಸಿಕ್ಕಿದೆ. ಅದನ್ನು ಆತ ಎಲ್ಲಿಂದ ತರಿಸಿದ್ದ? ಡ್ರಗ್ಸ್ ಪೂರೈಸಿದ್ದ ಪೆಡ್ಲರ್ ಯಾರು? ಎಂಬುದನ್ನು ಪತ್ತೆ ಮಾಡಬೇಕಿದೆ. ಹೀಗಾಗಿ, ಆತನನ್ನು ಕಸ್ಟಡಿಗೆ ನೀಡುವಂತೆ ನ್ಯಾಯಾಲಯವನ್ನು ಕೋರಲಾಗಿತ್ತು. ನಮ್ಮ ಮನವಿಯನ್ನು ನ್ಯಾಯಾಲಯ ಮನ್ನಿಸಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.
ಇದನ್ನೂ ಓದಿ: ಬಿಟ್ ಕಾಯಿನ್ ಹಗರಣ: ಆರೋಪಿ ಶ್ರೀಕಿ ಮಾದಕ ವ್ಯಸನ, ಖಿನ್ನತೆಯಿಂದ ಬಳಲುತ್ತಿರುವ ಶಂಕೆ
ವಿಷ್ಣು ಭಟ್ ಜೊತೆ ಪಾರ್ಟಿಗಳಲ್ಲಿ ಪಾಲ್ಗೊಂಡು ಡ್ರಗ್ಸ್ ಸೇವಿಸುತ್ತಿದ್ದವರ ಹಾಗೂ ಡ್ರಗ್ಸ್ ಮಾರುತ್ತಿದ್ದವರ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ. ಪಟ್ಟಿ ಸಿದ್ಧಪಡಿಸಿ ಎಲ್ಲರಿಗೂ ನೋಟಿಸ್ ನೀಡಿ ವಿಚಾರಣೆ ನಡೆಸುವ ಸಾಧ್ಯತೆ ಇದೆ.
ಶ್ರೀಕಿ ಈ ಹಿಂದೆ ಮಾದಕ ದ್ರವ್ಯ ಪ್ರಕರಣದಲ್ಲಿ ಭಾಗಿಯಾಗಿದ್ದು, ವಿವರವಾದ ತನಿಖೆಯಿಂದ ವೆಬ್‌ಸೈಟ್‌ಗಳನ್ನು ಹ್ಯಾಕಿಂಗ್‌ನಲ್ಲಿ ತೊಡಗಿಸಿಕೊಂಡಿರುವುದು ಬೆಳಕಿಗೆ ಬಂದಿದೆ. ಆತನಿಂದ 9 ಕೋಟಿ ರೂಪಾಯಿ ಮೌಲ್ಯದ ಬಿಟ್‌ಕಾಯಿನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


