ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ ಫೋನ್ ಪರಿಶೀಲನೆಗೆ ಮುಂದಾದ ಪೊಲೀಸರು
ಬಿಟ್ ಕಾಯಿನ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೇಲೆ ಹೊರಗೆ ಬಂದಿರುವ ಹ್ಯಾಕರ್ ಶ್ರೀಕಿ ಅಲಿಯಾಸ್ ಶ್ರೀಕೃಷ್ಣ ಮತ್ತೆ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದಾನಾ ಎಂಬುದರ ಕುರಿತು ಪರಿಶೀಲನೆ ನಡೆಸಲು ಪೊಲೀಸರು ಮುಂದಾಗಿದ್ದಾರೆ.

ಬೆಂಗಳೂರು: ಬಿಟ್ ಕಾಯಿನ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೇಲೆ ಹೊರಗೆ ಬಂದಿರುವ ಹ್ಯಾಕರ್ ಶ್ರೀಕಿ ಅಲಿಯಾಸ್ ಶ್ರೀಕೃಷ್ಣ ಮತ್ತೆ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದಾನಾ ಎಂಬುದರ ಕುರಿತು ಪರಿಶೀಲನೆ ನಡೆಸಲು ಪೊಲೀಸರು ಮುಂದಾಗಿದ್ದಾರೆ.
ಜೆಬಿ ನಗರ ಪೊಲೀಸರಿಂದ ಬಂಧನಕ್ಕೊಳಗಾಗಿ ನ್ಯಾಯಾಂಗ ಬಂಧನದಲ್ಲಿದ್ದ ಈತನಿಗೆ ರೂ.4,500 ದಂಡದ ಜೊತೆಗೆ ಮಂಗಳವಾರ ನ್ಯಾಯಾಲಯ ಜಾಮೀನು ನೀಡಿತ್ತು.
ಶ್ರೀಕಿ ಇತರರೊಂದಿಗೆ ಸೇರಿಕೊಂಡು ಹಣ ಸುಲಿಗೆ ಮಾಡಲು ವೆಬ್‌ಸೈಟ್‌ಗಳನ್ನು ಹ್ಯಾಕ್ ಮಾಡುತ್ತಾನೆಂಬ ಅನುಮಾನಗಳು ವ್ಯಕ್ತವಾಗುತ್ತಿವೆ. ಇದೇ ಕಾರಣಕ್ಕೆ ಹೋಟೆಲ್‌ಗೆ ಹೋಗಿರಬಹುದೆಂಬ ಅನುಮಾನ ಹುಟ್ಟಿಕೊಂಡಿದೆ. ಇದೀಗ ಈತನ ಗೆಳೆಯ ವಿಷ್ಣು ಭಟ್ ನಮ್ಮ ವಶದಲ್ಲಿದ್ದು, ವಿಚಾರಣೆಗೊಳಪಡಿಸಲಾಗಿದೆ. ಇದೀಗ ಶ್ರೀಕಿಯ ಕಳೆದ 2 ವರ್ಷಗಳ ಫೋನ್ ಕಾಲ್ ರೆಕಾರ್ಡ್ ಹಾಗೂ ಆತನ ಟ್ರಾವೆಲ್ ಹಿಸ್ಟರಿಯನ್ನು ತೆಗೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


