ರಾಜ್ಯ

ನವೆಂಬರ್ 14ರಿಂದ ನಡೆಯಬೇಕಿದ್ದ ಸಹಕಾರ ಸಪ್ತಾಹ ತಾತ್ಕಾಲಿಕವಾಗಿ ಮುಂದೂಡಿಕೆ

ಸಹಕಾರಿ ಸಪ್ತಾಹವನ್ನು ಯಶಸ್ವಿವಾಗಿ ಆಚರಿಸಲು ಪ್ರತಿ ವರ್ಷ ನವೆಂಬರ್ 14ರಂದು ಹಮ್ಮಿಕೊಳ್ಳಲಾಗುತ್ತಿತ್ತು. ರಾಜ್ಯದ ನಾನಾ ಜಿಲ್ಲೆಗಳಲ್ಲಿ 7 ದಿನ ಸಹಕಾರ ಸಪ್ತಾಹ ಹಮ್ಮಿಕೊಳ್ಳುವುದರ ಜೊತೆಗೆ ಸಹಕಾರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಮಹನೀಯರಿಗೆ ಮುಖ್ಯಮಂತ್ರಿಗಳು ಸಹಕಾರ ರತ್ನ ಪ್ರಶಸ್ತಿ ನೀಡಿ ಗೌರವಿಸುತ್ತಿದ್ದರು.

ನವೆಂಬರ್ 14ರಿಂದ ನಡೆಯಬೇಕಿದ್ದ ಸಹಕಾರ ಸಪ್ತಾಹ ತಾತ್ಕಾಲಿಕವಾಗಿ ಮುಂದೂಡಿಕೆ
ಸಹಕಾರ ಇಲಾಖೆ ಸಚಿವ ಎಸ್ ಟಿ ಸೋಮಶೇಖರ್
Published On :

ಬೆಂಗಳೂರು: ಸಹಕಾರಿ ಸಪ್ತಾಹವನ್ನು ಯಶಸ್ವಿವಾಗಿ ಆಚರಿಸಲು ಪ್ರತಿ ವರ್ಷ ನವೆಂಬರ್ 14ರಂದು ಹಮ್ಮಿಕೊಳ್ಳಲಾಗುತ್ತಿತ್ತು. ರಾಜ್ಯದ ನಾನಾ ಜಿಲ್ಲೆಗಳಲ್ಲಿ 7 ದಿನ ಸಹಕಾರ ಸಪ್ತಾಹ ಹಮ್ಮಿಕೊಳ್ಳುವುದರ ಜೊತೆಗೆ ಸಹಕಾರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಮಹನೀಯರಿಗೆ ಮುಖ್ಯಮಂತ್ರಿಗಳು ಸಹಕಾರ ರತ್ನ ಪ್ರಶಸ್ತಿ ನೀಡಿ ಗೌರವಿಸುತ್ತಿದ್ದರು.

ಈ ವರ್ಷ ಕೂಡ ನವೆಂಬರ್ 14ರ ಭಾನುವಾರ ಬೆಂಗಳೂರಿನಲ್ಲಿ, ನಂತರ ನಾನಾ ಜಿಲ್ಲೆಗಳಲ್ಲಿ ಸಹಕಾರ ಸಪ್ತಾಹ ಹಮ್ಮಿಕೊಳ್ಳಲು ನಿರ್ಧರಿಸಲಾಗಿತ್ತು.

ಆದರೆ 20 ಸ್ಥಳೀಯ ಸಂಸ್ಥೆಗಳಿಂದ 25 ವಿಧಾನಪರಿಷತ್ ಸ್ಥಾನಗಳಿಗೆ ಡಿ.10ರಂದು ವಿಧಾನಪರಿಷತ್ ಚುನಾವಣೆ ನಡೆಯುವುದರಿಂದ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಾಗಿದೆ. ಹೀಗಾಗಿ ನವೆಂಬರ್‌ 14ರಿಂದ ನಡೆಯಬೇಕಿದ್ದ ಸಹಕಾರ ಸಪ್ತಾಹ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದ್ದು ಮುಂದಿನ ದಿನಾಂಕವನ್ನು ನಂತರದಲ್ಲಿ ತಿಳಿಸಲಾಗುವುದು ಎಂದು ಸಹಕಾರ ಸಚಿವರು ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.