ಬಿಟ್ ಕಾಯಿನ್ ಹಗರಣ: ಪ್ರಧಾನಿಗೆ ಅನಾಮಧೇಯ ಪತ್ರ
ರಾಜ್ಯ ರಾಜಕೀಯದಲ್ಲಿ ಭಾರೀ ಕೋಲಾಹಲಕ್ಕೆ ಕಾರಣವಾಗಿರುವ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಅನಾಮಧೇಯ ಪತ್ರವೊಂದು ಪ್ರಧಾನಮಂತ್ರಿಗಳ ಕಚೇರಿ ತಲುಪಿದೆ.

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರೀ ಕೋಲಾಹಲಕ್ಕೆ ಕಾರಣವಾಗಿರುವ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಅನಾಮಧೇಯ ಪತ್ರವೊಂದು ಪ್ರಧಾನಮಂತ್ರಿಗಳ ಕಚೇರಿ ತಲುಪಿದೆ.
ಬೆಂಗಳೂರು ಸೇರಿದಂತೆ ಅಂತಾರಾಷ್ಟ್ರೀಯ ವಂಚಕ ಗ್ಯಾಂಗ್ ಜೊತೆಗೆ ಸರ್ಕಾರದ ಆಡಳಿತ ಯಂತ್ರದ ಮತ್ತು ರಾಜಕಾರಣಿಗಳು ಭಾಗಿಯಾಗಿದ್ದಾರೆ ಎಂದುಪತ್ರದಲ್ಲಿ ಉಲ್ಲೇಖಿಸಲಾಗಿದೆ.
ರಾಜ್ಯದ ಕೆಲವು ಪ್ರಮುಖ ರಾಜಕಾರಣಿಗಳ ವಿರುದ್ಧ ವ್ಯಾಪಕವಾದ ಆರೋಪಗಳನ್ನು ಮಾಡಿದ್ದು ಸಹಿ ಇಲ್ಲದ ಪತ್ರದಲ್ಲಿ, ಪ್ರಧಾನಿ ಕಾರ್ಯಾಲಯ, ರಾಷ್ಟ್ರೀಯ ಭದ್ರತಾ ಸಲಹೆಗಾರ, ಜಾರಿ ನಿರ್ದೇಶನಾಲಯ ಮತ್ತು ಗುಪ್ತಚರ ಬ್ಯೂರೋ, ಗೆ ವಿಳಾಸ ಹಾಕಲಾಗಿದೆ.
ಕಳೆದ ವರ್ಷ ಡ್ರಗ್ಸ್ ಪ್ರಕರಣದಲ್ಲಿ ಸಿಸಿಬಿಯಿಂದ ಬಂಧನಕ್ಕೊಳಗಾದ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ನಡೆಸಿದ ಭ್ರಷ್ಟಾಚಾರ ಮತ್ತು ಬಿಟ್‌ಕಾಯಿನ್ ಹಗರಣದಲ್ಲಿ ಕೆಲವು ಹಿರಿಯ ಐಪಿಎಸ್ ಅಧಿಕಾರಿಗಳು ಸೇರಿದಂತೆ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ: ಬಿಟ್ ಕಾಯಿನ್ ಬಗ್ಗೆ ಚರ್ಚೆ ಆಗಿಲ್ಲ, ದಿಟ್ಟತನದಿಂದ ನಿಮ್ಮ ಕೆಲಸ ಮುಂದುವರಿಸುವಂತೆ ಪ್ರಧಾನಿ ಸೂಚನೆ: ಸಿಎಂ ಬೊಮ್ಮಾಯಿ
ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಕುಚೇಷ್ಟೆ ನಡೆಸಿವೆ, ಆರೋಪದಲ್ಲಿ ಸತ್ಯವಿದ್ದಿದ್ದರೇ ಸಹಿ ಯಾಕೆ ಮಾಡಲಿಲ್ಲ, ಇದರ ಸತ್ಯಾಸತ್ಯತೆ ಇಲ್ಲೇ ತಿಳಿಯುತ್ತಿದೆ ಎಂದು ಮೂಲಗಳು ತಿಳಿಸಿವೆ. ಶ್ರೀಕೃಷ್ಣನೊಂದಿಗೆ ಯಾವುದೇ ಬಿಟ್‌ಕಾಯಿನ್ ಹಗರಣ ಕಂಡುಬಂದಿಲ್ಲ. ಬಿಟ್‌ಕಾಯಿನ್ ಎಕ್ಸ್‌ಚೇಂಜ್‌ಗಳು ಕೆವೈಸಿ ಮಾನದಂಡಗಳನ್ನು ನಿರ್ವಹಿಸಿಲ್ಲ ಎಂದು ನಗರ ಪೊಲೀಸರು ಮತ್ತು ಇಡಿ ವರದಿ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


