ರಾಜ್ಯದಲ್ಲಿ ಇಂದು ಕೊರೋನಾ ಸಾವಿನ ಸಂಖ್ಯೆಯಲ್ಲಿ ಇಳಿಕೆ; 227 ಹೊಸ ಕೇಸ್ ಪತ್ತೆ: ಸಕ್ರಿಯ ಪ್ರಕರಣಗಳ ಏರಿಕೆ
ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 227 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,91,369ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 227 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,91,369ಕ್ಕೆ ಏರಿಕೆಯಾಗಿದೆ.
206 ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸದ್ಯ 8036 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಕೊರೋನಾ ಸಾವಿನ ಸಂಖ್ಯೆಯಲ್ಲಿ ತೀವ್ರ ಇಳಿಕೆಯಾಗಿದೆ. ಸೋಂಕಿನಿಂದ ಇಂದು ಇಬ್ಬರು ಮೃತಪಟ್ಟಿದ್ದು, ಒಟ್ಟಾರೆ ಮೃತರ ಸಂಖ್ಯೆ 38140 ಆಗಿದೆ. ಒಟ್ಟು ಸೋಂಕಿನ ಪ್ರಮಾಣ ಶೇ. 0.22 ರಷ್ಟಿದ್ದು, ಮರಣ ಪ್ರಮಾಣ ಶೇ. 0.88 ರಷ್ಟಿದೆ.
ಬಾಗಲಕೋಟೆ, ಬೀದರ್, ದಾವಣಗೆರೆ, ಗದಗ್, ಹಾವೇರಿ, ಕೊಪ್ಪಳ, ರಾಯಚೂರು, ರಾಮನಗರ, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


