ಯಾದಗಿರಿ: ಆಟೋ, ಲಾರಿ ನಡುವೆ ಭೀಕರ ಅಪಘಾತ; ಎರಡೂವರೆ ವರ್ಷದ ಮಗು ಸೇರಿ ಮೂವರ ದುರ್ಮರಣ
ಆಟೋ ಮತ್ತು ಲಾರಿ ನಡುವೆ ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಯಾದಗಿರಿ ನಗರದ ಮುದ್ನಾಳ್ ಕ್ರಾಸ್ ಬಳಿ ಸಂಭವಿಸಿದೆ.

ಯಾದಗಿರಿ: ಆಟೋ ಮತ್ತು ಲಾರಿ ನಡುವೆ ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಯಾದಗಿರಿ ನಗರದ ಮುದ್ನಾಳ್ ಕ್ರಾಸ್ ಬಳಿ ಸಂಭವಿಸಿದೆ.
ಎರಡೂವರೆ ವರ್ಷದ ಮಗು ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಆಟೋದಲ್ಲಿದ್ದ 6 ಜನರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಯಾದಗಿರಿ ತಾಲೂಕಿನ ಕಂಚಗಾರಹಳ್ಳಿ ತಾಂಡಾಗೆ ಹೋಗುತ್ತಿದ್ದರು. ಈ ವೇಳೆ ಭೀಕರ ಅಪಘಾತ ನಡೆದಿದೆ.
ಆಟೋ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಆಟೋ ಚಾಲಕ, ಮಗು ಕ್ರಿಶ್ ಹಾಗೂ ಮಗುವಿನ ಅಜ್ಜ ಸಾವನ್ನಪ್ಪಿದ್ದಾರೆ ಆಟೋ ಚಾಲಕ ಲಕ್ಷ್ಮಣ ಕಂಚಗಾರಹಳ್ಳಿ ತಾಂಡ ನಿವಾಸಿ, ಶಹಾಪುರ ತಾಲೂಕಿನ ಹೋತಪೇಟೆ ನಿವಾಸಿ ಜಯರಾಜ್ ಹಾಗೂ ಮಗು ದುರಂತದಲ್ಲಿ ಮರಣ ಹೊಂದಿದ್ದಾರೆ.
ಆಟೋದಲ್ಲಿ ಪ್ರಯಾಣಿಸುತ್ತಿದ್ದ ಇನ್ನು 6 ಜನರಿಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಯಾದಗಿರಿ ಸಂಚಾರಿ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


