ರಾಜ್ಯ

ರಾಜ್ಯದಲ್ಲಿಂದು ಕೊರೋನಾದಿಂದ ಇಬ್ಬರು ಸಾವು: 236 ಹೊಸ ಪ್ರಕರಣ ಪತ್ತೆ, 264 ಸೋಂಕಿತರು ಗುಣಮುಖ

ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದ್ದು, ಇಂದು 236 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,91, 850ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿಂದು ಕೊರೋನಾದಿಂದ ಇಬ್ಬರು ಸಾವು: 236 ಹೊಸ ಪ್ರಕರಣ ಪತ್ತೆ, 264 ಸೋಂಕಿತರು ಗುಣಮುಖ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದ್ದು, ಇಂದು 236 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,91, 850ಕ್ಕೆ ಏರಿಕೆಯಾಗಿದೆ.

264 ಸೋಂಕಿತರು ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸದ್ಯ 7,997 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇಂದು ಇಬ್ಬರು ಸೋಂಕಿತರು ಮೃತಪಟ್ಟಿದ್ದು, ಒಟ್ಟಾರೇ ಮೃತರ ಸಂಖ್ಯೆ 38,145ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕಿನ ಪ್ರಮಾಣ ಶೇಕಡಾ 0.24 ರಷ್ಟಿದ್ದು, ಮರಣ ಪ್ರಮಾಣ ಶೇಕಡಾ 0.84 ರಷ್ಟಿದೆ.

ಬಾಗಲಕೋಟೆ, ಬೀದರ್, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಗದಗ್, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ರಾಮನಗರ, ವಿಜಯಪುರ ಹಾಗೂ ಯಾದಗಿರಿಯಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.