ಗಾರ್ಮೆಂಟ್ಸ್ ಉದ್ಯಮಿ ಶ್ರೀಧರ್ ಹತ್ಯೆ ಪ್ರಕರಣ: ಆರೋಪಿ ಕಾಲಿಗೆ ಗುಂಡು!
ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಮೊಳಗಿದೆ. ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದಾಗ ಆರೋಪಿಯ ಕಾಲಿಗೆ ಖಾಕಿ ಪಡೆ ಗುಂಡು ಹಾರಿಸಿದೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಮೊಳಗಿದೆ. ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದಾಗ ಆರೋಪಿಯ ಕಾಲಿಗೆ ಖಾಕಿ ಪಡೆ ಗುಂಡು ಹಾರಿಸಿದೆ.
ನಾಗವಾರ ರಿಂಗ್ ರಸ್ತೆಯ ಸರ್ವಿಸ್ ರೋಡ್ ನಲ್ಲಿ ನವೆಂಬರ್ 14ರಂದು ಗಾರ್ಮೆಂಟ್ಸ್ ಉದ್ಯಮಿ ಶ್ರೀಧರ್ ಎಂಬವರ ಹತ್ಯೆ ನಡೆದಿತ್ತು. ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯಕ್ಕೆ ಬಳಸಿದ ಮಾರಕಾಸ್ತ್ರ ಜಪ್ತಿ ಮಾಡಲು ಪೊಲೀಸರು ತೆರಳಿದ್ದರು. ಈ ವೇಳೆ ಪಿಎಸ್ಐ ಮೇಲೆ ಹಲ್ಲೆ ನಡೆಸಿ ಆರೋಪಿ ರಘು ಪರಾರಿಯಾಗಲು ಯತ್ನಿಸಿದ್ದಾನೆ. ತಕ್ಷಣ ಅಲರ್ಟ್ ಆದ ಇನ್ಸ್ ಪೆಕ್ಟರ್ ವಸಂತ್ ಕುಮಾರ್, ಆತ್ಮ ರಕ್ಷಣೆಗಾಗಿ ಆರೋಪಿ ರಘು ಮೇಲೆ ಗುಂಡು ಹಾರಿಸಿದ್ದಾರೆ. ರಾಮಮೂರ್ತಿನಗರದ ಹೆಣ್ಣೂರು ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಪೂರ್ವ ವಿಭಾಗದ ಡಿಸಿಪಿ ಶರಣಪ್ಪ, ಶ್ರೀಧರ್ ಕೊಲೆ ಪ್ರಕರಣದ ಆರೋಪಿಯನ್ನ ದಸ್ತಗಿರಿ ಮಾಡಲಾಗಿದೆ. ಕೃತ್ಯಕ್ಕೆ ಬಳಸಿದ್ದ ಆಯುಧ ಜಪ್ತಿ ಮಾಡಲು ಆರೋಪಿಯನ್ನು ಸ್ಥಳಕ್ಕೆ ಕರೆತರಲಾಗಿತ್ತು. ಈ ವೇಳೆ ಆರೋಪಿ ರಘು ಕೃತ್ಯಕ್ಕೆ ಬಳಸಿದ್ದ ಆಯುಧದಿಂದ ಪಿಎಸ್ಐ ಲಿಂಗರಾಜ್ ಮೇಲೆ ಹಲ್ಲೆ ಮಾಡಿದ್ದಾನೆ. ಆತ್ಮರಕ್ಷಣೆಗಾಗಿ ಇನ್ಸ್ ಪೆಕ್ಟರ್ ವಸಂತ್ ಕುಮಾರ್ ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಆದರೂ ಸಹ ಆರೋಪಿ ಪೊಲೀಸರ ಮೇಲೆ ಮತ್ತೆ ಹಲ್ಲೆ ಮಾಡಲು ಮುಂದಾಗಿದ್ದಾನೆ. ಈ ಹಿನ್ನಲೆ ಇನ್ಸ್ ಪೆಕ್ಟರ್ ವಸಂತ್ ಕುಮಾರ್ ಆರೋಪಿ ರಘು ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ ಅಂತಾ ತಿಳಿಸಿದರು.
ಗಾರ್ಮೆಂಟ್ಸ್ ಉದ್ಯಮಿ ಶ್ರೀಧರ್ ಕೊಲೆ ಪ್ರಕರಣದಲ್ಲಿ ಒಟ್ಟು 6 ಮಂದಿ ಆರೋಪಿಯನ್ನ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಮಹೇಶ್, ಹರೀಶ್, ಸುಜೀತ್ ನಾಯರ್, ಪ್ರಭು, ನೆಲ್ಸನ್ ರಘು ಬಂಧಿತ ಆರೋಪಿಗಳಾಗಿದ್ದಾರೆ. ಹಳೆ ಹಾಗೂ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಉದ್ಯಮಿ ಶ್ರೀಧರ್ ಅವರನ್ನು ಕೊಲೆ ಮಾಡಿರುವುದಾಗಿ ಪೊಲೀಸರ ಮುಂದೆ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


