ಕೊರೋನಾ ಹೆಚ್ಚಳ: ರಾಜ್ಯದಲ್ಲಿ ಮತ್ತೆ 300ರ ಗಡಿ ದಾಟಿದ ಕೋವಿಡ್ ಪ್ರಕರಣಗಳ ಸಂಖ್ಯೆ; ನಾಲ್ಕು ಸಾವು!
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 313 ಹೊಸ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,92,897ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 313 ಹೊಸ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,92,897ಕ್ಕೆ ಏರಿಕೆಯಾಗಿದೆ.
ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ 4 ಮಂದಿ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 38,165ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು 207 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,54,463ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ ಕೊರೋನಾದಿಂದ ಇಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.
ರಾಜ್ಯದಲ್ಲಿ ಇಂದು 369 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,47,354ಕ್ಕೆ ಏರಿಕೆಯಾಗಿದೆ. ಇನ್ನು 7,349 ಸಕ್ರೀಯ ಪ್ರಕರಣಗಳಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


