ಬೆಂಗಳೂರು: ಮಳೆಯಿಂದ ಭೀಕರ ಅಪಘಾತ, ಮೂವರು ದುರ್ಮರಣ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ಬೆಟ್ಟ ಹಲಸೂರು ಕ್ರಾಸ್ ಬಳಿ ಗುರುವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ದುರ್ಮರಣ ಹೊಂದಿದ್ದಾರೆ.

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ಬೆಟ್ಟ ಹಲಸೂರು ಕ್ರಾಸ್ ಬಳಿ ಗುರುವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ದುರ್ಮರಣ ಹೊಂದಿದ್ದಾರೆ. ಭಾರೀ ಮಳೆಯಿಂದಾಗಿ ರಸ್ತೆ ಕಾಣದೆ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ನಂತರ ಎದುರುಗಡೆ ಬರುತ್ತಿದ್ದ ಕಾರೊಂದಕ್ಕೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಕೆಳಗಡೆ ಸಿಕ್ಕಿದ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಅದರಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತೊಂದು ಕಾರಿನ ಇಬ್ಬರು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಕೆಳಗಡೆ ಸಿಲುಕಿದ ಕಾರಿನಲ್ಲಿದ್ದ ಇಬ್ಬರು ಹೆಂಗಸರು ಹಾಗೂ ಒಬ್ಬ ಗಂಡಸು ಸ್ಥಳದಲ್ಲಿಯೇ ಮೃತಪಟ್ಟಿರುವುದಾಗಿ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಈ ಸಂಬಂಧ ಚಿಕ್ಕಜಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


