ಕೆಲ ವರ್ಗದವರಿಗೆ ಅರ್ಥ ಮಾಡಿಸಲಾಗದೆ 3 ಕೃಷಿ ಮಸೂದೆಗಳ ರದ್ದುಪಡಿಸಲಾಗಿದೆ: ರಾಜ್ಯ ಕೃಷಿ ಸಚಿವ
ಕೆಲ ವರ್ಗದವರಿಗೆ ಅರ್ಥ ಮಾಡಿಸಲು ಸಾಧ್ಯವಾಗದೆ 3 ಕೃಷಿ ಮಸೂದೆಗಳ ರದ್ದುಪಡಿಸಲಾಗಿದೆ ಎಂದು ರಾಜ್ಯ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಶುಕ್ರವಾರ ಹೇಳಿದ್ದಾರೆ.

ಬೆಂಗಳೂರು: ಕೆಲ ವರ್ಗದವರಿಗೆ ಅರ್ಥ ಮಾಡಿಸಲು ಸಾಧ್ಯವಾಗದೆ 3 ಕೃಷಿ ಮಸೂದೆಗಳ ರದ್ದುಪಡಿಸಲಾಗಿದೆ ಎಂದು ರಾಜ್ಯ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಶುಕ್ರವಾರ ಹೇಳಿದ್ದಾರೆ.
ಇಂದು ಬೆಳಿಗ್ಗೆ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿಯವರು, 3 ಕೃಷಿ ಮಸೂದೆಗಳ ರದ್ದುಪಡಿಸುವುದಾಗಿ ಘೋಷಣೆ ಮಾಡಿದ್ದರು.
ಕೇಂದ್ರ ಸರ್ಕಾರ ಈ ನಿರ್ಧಾರ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಬಿ.ಸಿ.ಪಾಟೀಲ್ ಅವರು, ನೂತನ ಮೂರು ಕೃಷಿ ಕಾನೂನುಗಳ ಉದ್ದೇಶಗಳನ್ನು ಕೆಲವು ವರ್ಗದವರಿಗೆ ಅರ್ಥ ಮಾಡಿಸಲು ಸಾಧ್ಯವಾಗದೇ ಇರುವುದರಿಂದ ಕೇಂದ್ರ ಸರ್ಕಾರ ಅವುಗಳನ್ನು ಹಿಂತೆಗೆದುಕೊಳ್ಳಲು ನಿರ್ಧರಿಸಿದೆ ಎಂದು ಹೇಳಿದ್ದಾರೆ.
ರೈತರಿಗೆ ಸಮಂಜಸವಾದ ದರದಲ್ಲಿ ಬಿತ್ತನೆ ಬೀಜಗಳನ್ನು ಒದಗಿಸಲು ಮತ್ತು ಸೂಕ್ಷ್ಮ ನೀರಾವರಿ, 22 ಕೋಟಿ ಮಣ್ಣಿನ ಆರೋಗ್ಯ ಕಾರ್ಡ್ಗಳಂತಹ ಸೌಲಭ್ಯಗಳನ್ನು ಒದಗಿಸಲು ನಾವು ಕೆಲಸ ಮಾಡಿದ್ದೇವೆ. ಇಂತಹ ಅಂಶಗಳು ಕೃಷಿ ಉತ್ಪಾದನೆ ಹೆಚ್ಚಳಕ್ಕೆ ಕಾರಣವಾಗಿವೆ. ಆದರೂ ನೂತನ ಕೃಷಿ ಕಾಯಿದೆಗಳು ಎಲ್ಲರಿಗೂ ಸಮ್ಮತವಾಗದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅವುಗಳನ್ನು ಹಿಂತೆಗೆದುಕೊಳ್ಳಲು ನಿರ್ಧರಿಸಿದ್ದಾರೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


