ಚಿತ್ರದುರ್ಗ: ಮಳೆಯಿಂದ ಗೋಡೆ ಕುಸಿದು ಮೂವರು ದುರ್ಮರಣ
ಗುರುವಾರದಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಎರಡು ಪ್ರತ್ಯೇಕ ಘಟನೆಗಳಲ್ಲಿ ಗೋಡೆ ಕುಸಿದು ದಂಪತಿ ಸೇರಿದಂತೆ ಮೂವರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿದೆ.

ಚಿತ್ರದುರ್ಗ: ಗುರುವಾರದಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಎರಡು ಪ್ರತ್ಯೇಕ ಘಟನೆಗಳಲ್ಲಿ ಗೋಡೆ ಕುಸಿದು ದಂಪತಿ ಸೇರಿದಂತೆ ಮೂವರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿದೆ. ಮೃತರನ್ನು ನಾಯಕನಹಟ್ಟಿಯ ಕಂಪ್ಲೇಶಪ್ಪ(45), ಪತ್ನಿ ತಿಪ್ಪಮ್ಮ(38) ಮತ್ತು ಬ್ಯಾಡರಹಳ್ಳಿಯ ತ್ರಿವೇಣಿ (25) ಎಂದು ಗುರುತಿಸಲಾಗಿದೆ.
ನಾಯಕನಹಟ್ಟಿಯ ಅಂಬೇಡ್ಕರ್ ಕಾಲೋನಿಯಲ್ಲಿ ಗೋಡೆಯೊಂದು ಕುಸಿದು ಬಿದ್ದ ನಂತರ ದಂಪತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಘಟನೆ ನಡೆದಾಗ ಅವರು ಗಾಢ ನಿದ್ರೆಯಲ್ಲಿದ್ದರು ಎನ್ನಲಾಗಿದೆ. ಅವರ ಪುತ್ರ ಅರುಣ್ ಕುಮಾರ್ ಬದುಕುಳಿದಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮತ್ತೊಂದು ಘಟನೆಯಲ್ಲಿ ಬ್ಯಾಡರಹಳ್ಳಿಯಲ್ಲಿ ಕೃಷ್ಣಮೂರ್ತಿ ಎಂಬವರಿಗೆ ಸೇರಿದ ಮನೆ ಕುಸಿದು ಅವರ ಪತ್ನಿ ತ್ರಿವೇಣಿ ಮೃತಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


