ಧರ್ಮಸ್ಥಳ: ನವೆಂಬರ್ 29 ರಿಂದ ಡಿಸೆಂಬರ್ 4 ರವರೆಗೆ ಲಕ್ಷದೀಪೋತ್ಸವ ಕಾರ್ಯಕ್ರಮ
ಕಾರ್ತಿಕ ಮಾಸದಲ್ಲಿ ಧರ್ಮಸ್ಥಳ ಶ್ರೀ ಮಂಜುನಾಥ ದೇವಾಲಯದಲ್ಲಿ ನೆರವೇರುವ ಲಕ್ಷ ದೀಪೋತ್ಸವ ಈ ವರ್ಷ ನವೆಂಬರ್ 29ರಿಂದ ಡಿಸೆಂಬರ್ 4ರವರೆಗೆ ಕಾರ್ಯಕ್ರಮ ನಡೆಯಲಿದ್ದು ಡಿಸೆಂಬರ್ 3ರಂದು ಲಕ್ಷದೀಪೋತ್ಸವ ನಡೆಯಲಿದೆ.

ಧರ್ಮಸ್ಥಳ: ಕಾರ್ತಿಕ ಮಾಸದಲ್ಲಿ ಧರ್ಮಸ್ಥಳ ಶ್ರೀ ಮಂಜುನಾಥ ದೇವಾಲಯದಲ್ಲಿ ನೆರವೇರುವ ಲಕ್ಷ ದೀಪೋತ್ಸವ ಈ ವರ್ಷ ನವೆಂಬರ್ 29ರಿಂದ ಡಿಸೆಂಬರ್ 4ರವರೆಗೆ ಕಾರ್ಯಕ್ರಮ ನಡೆಯಲಿದ್ದು ಡಿಸೆಂಬರ್ 3ರಂದು ಲಕ್ಷದೀಪೋತ್ಸವ ನಡೆಯಲಿದೆ.
ಡಿಸೆಂಬರ್ 2ರಂದು ಸಂಜೆ 5ಗಂಟೆಗೆ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಸರ್ವಧರ್ಮ ಸಮ್ಮೇಳನದ 89ನೇ ಅಧಿವೇಶನವನ್ನು ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸಲಿದ್ದಾರೆ. ಬೆಂಗಳೂರಿನ ಎಸ್ ವ್ಯಾಸಯೋಗ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಪ್ರೊ ರಾಮಚಂದ್ರ ಭಟ್ ಅಧ್ಯಕ್ಷತೆ ವಹಿಸಲಿದ್ದು, ಹಲವು ಪ್ರಮುಖರು ಉಪನ್ಯಾಸ ನೀಡಲಿದ್ದಾರೆ.ಡಿಸೆಂಬರ್ 2 ಮತ್ತು 3ರಂದು ಸರ್ವಧರ್ಮ ಸಾಹಿತ್ಯ ಸಮ್ಮೇಳನ ನೆರವೇರಲಿದೆ.
6 ದಿನಗಳ ಕಾಲವೂ ಪ್ರತಿದಿನ ರಾತ್ರಿ 9 ಗಂಟೆಗೆ ಉತ್ಸವಗಳು ನಡೆಯಲಿದೆ. ಡಿಸೆಂಬರ್ 4ರಂದು ಶ್ರೀ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆಯೊಂದಿಗೆ ಲಕ್ಷ ದೀಪೋತ್ಸವ ಮುಕ್ತಾಯವಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


